ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಹಿಟ್ ಅಂಡ್ ರನ್: ಅಪರಿಚಿತ ವಾಹನ ಡಿಕ್ಕಿಯಾಗಿ ಕೂಲಿ ಕಾರ್ಮಿಕ ಸಾವು!

ಚಿಕ್ಕಮಗಳೂರು ಸಮೀಪದ ಮಾಗಡಿ ಹ್ಯಾಂಡ್ ಪೋಸ್ಟ್ ಬಳಿಯ ಕೆರೆ ಏರಿ ಮೇಲೆ ನಡೆದುಕೊಂಡು ಹೋಗುತ್ತಿದ್ದ ಕೂಲಿ ಕಾರ್ಮಿಕರೊಬ್ಬರಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾಗಿದ್ದು, ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮೃತ ದುರ್ದೈವಿಯನ್ನು ಪರಮೇಶ್ ಎಂದು ಗುರುತಿಸಲಾಗಿದೆ. ವಾಹನ ಡಿಕ್ಕಿಯಾದ ರಭಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನ, ಬೆಂಗಳೂರು ಹಾಗೂ ಬಳಿಕ ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಯಿತಾದರೂ, ಯಾವುದೇ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಅವರ ಪತ್ನಿ ಪಾರ್ವತಿ ಅವರು ನೀಡಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಅಪಘಾತವೆಸಗಿ, ಗಾಯಾಳುವನ್ನು ಉಪಚರಿಸದೆ ಹಾಗೂ ವಾಹನ ನಿಲ್ಲಿಸದೆ ಪರಾರಿಯಾದ ಅಪರಿಚಿತ ವಾಹನ ಚಾಲಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಇದೀಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

02/11/2026 10:50 pm

Cinque Terre

540

Cinque Terre

0

ಸಂಬಂಧಿತ ಸುದ್ದಿ