ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಳ್ಳಾರಿಯಲ್ಲಿ ಇಸ್ಪೀಟ್ ಜೂಜಾಟದ ಅಡ್ಡೆ ಮೇಲೆ ಖಾಕಿ ದಾಳಿ..!

ಬಳ್ಳಾರಿ ತಾಲೂಕಿನ ಕೊಳಗಲ್ ಗ್ರಾಮದ ಕೆರೆಯ ದಂಡೆಯಲ್ಲಿ ನಡೆಯುತ್ತಿದ್ದ ಅಂದರ್‌-ಬಾಹರ್ ಇಸ್ಪೀಟ್ ಜೂಜಾಟದ ಅಡ್ಡೆ ಮೇಲೆ ಬಳ್ಳಾರಿ ಗ್ರಾಮೀಣ ಪೊಲೀಸರು ದಾಳಿ ನಡೆಸಿದ್ದಾರೆ. ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು, ಜೂಜಾಟದಲ್ಲಿ ತೊಡಗಿದ್ದ 13 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ದಾಳಿಯ ವೇಳೆ 2.80 ಲಕ್ಷ ರೂಪಾಯಿ ನಗದು, 13 ಮೊಬೈಲ್‌ಗಳು ಹಾಗೂ 8 ಬೈಕ್‌ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಈ ಸಂಬಂಧ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಹೊನ್ನುರಸ್ವಾಮಿ ಕೆ.ಟಿ. ಪಬ್ಲಿಕ್ ನೆಕ್ಸ್ಟ್, ಬಳ್ಳಾರಿ

Edited By : Vinayak Patil
PublicNext

PublicNext

03/11/2026 07:45 am

Cinque Terre

10.46 K

Cinque Terre

0

ಸಂಬಂಧಿತ ಸುದ್ದಿ