ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಬುರಗಿ : ಹಾಸ್ಟೆಲ್ ಸೇರಿದ ಮೊದಲ ದಿನವೇ ವಿದ್ಯಾರ್ಥಿ ಮೇಲೆ ಹಲ್ಲೆ - ಐವರ ವಿರುದ್ಧ ಕೇಸ್ ದಾಖಲು!

ಕಲಬುರಗಿ : ನಗರದ ಅಂಬೇಡ್ಕರ್ ವಸತಿ ನಿಲಯದಲ್ಲಿ ಡಿಪ್ಲೊಮಾ ವಿದ್ಯಾರ್ಥಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಸುಮೀತ್ ಎಂಬ ವಿದ್ಯಾರ್ಥಿಯೇ ಹಲ್ಲೆಗೊಳಗಾದವರು. ಅಕ್ಟೋಬರ್ 29ರಂದು ಹಾಸ್ಟೆಲ್‌ಗೆ ಪ್ರವೇಶ ಪಡೆದ ಮೊದಲ ದಿನವೇ ಆತನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಹಾಸ್ಟೆಲ್‌ನಲ್ಲಿದ್ದ ಸಹಪಾಟಿ ವಿದ್ಯಾರ್ಥಿಗಳು ₹30 ಸಾವಿರ ಹಣಕ್ಕಾಗಿ ಸುಮೀತ್‌ನನ್ನು ಬೆತ್ತಲೆಗೊಳಿಸಿ ಕಟ್ಟಿಗೆ, ಕಬ್ಬಿಣದ ರಾಡ್ ಹಾಗೂ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ಸುಮೀತ್ ಗಂಭೀರವಾಗಿ ಗಾಯಗೊಂಡಿದ್ದು, ಮಾರಣಾಂತಿಕ ಹಲ್ಲೆಯಿಂದ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ರೋಷನ್, ಶರಣು, ಲಕ್ಷ್ಮಣ್, ರಾಜಕುಮಾರ್ ಸೇರಿದಂತೆ ಐವರ ವಿರುದ್ಧ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯಿಂದ ಆಕ್ರೋಶಗೊಂಡಿರುವ ವಿದ್ಯಾರ್ಥಿಯ ಪೋಷಕರು, ತಮ್ಮ ಮಗನಿಗೆ ಸೂಕ್ತ ನ್ಯಾಯ ದೊರಕಿಸಿಕೊಡಬೇಕು. ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಘಟನೆಗೆ ಸಂಬಂಧಿಸಿದಂತೆ ಹಾಸ್ಟೆಲ್ ವಾರ್ಡನ್ ಪಾತ್ರದ ಬಗ್ಗೆಯೂ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ಇನ್ನು 24 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸದಿದ್ದರೆ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುವುದಾಗಿ ಪೋಷಕರು ಎಚ್ಚರಿಕೆ ನೀಡಿದ್ದಾರೆ.

ವಿದ್ಯಾರ್ಥಿಗಳ ವಸತಿ ಮತ್ತು ಶಿಕ್ಷಣಕ್ಕೆ ಸುರಕ್ಷಿತ ವಾತಾವರಣ ಕಲ್ಪಿಸಬೇಕಾದ ಹಾಸ್ಟೆಲ್‌ನಲ್ಲೇ ಇಂತಹ ಘಟನೆ ನಡೆದಿರುವುದು ಆತಂಕಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಪೊಲೀಸರು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಕೇಳಿಬಂದಿದೆ.

Edited By : Vinayak Patil
PublicNext

PublicNext

03/11/2026 11:17 am

Cinque Terre

9.58 K

Cinque Terre

3

ಸಂಬಂಧಿತ ಸುದ್ದಿ