ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುರತ್ಕಲ್: ಬೈಕಂಪಾಡಿ ಬಳಿ ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ-ಸವಾರ ಮೃತ್ಯು

ಸುರತ್ಕಲ್: ರಾಷ್ಟ್ರೀಯ ಹೆದ್ದಾರಿ 66ರ ಬೈಕಂಪಾಡಿ ಬಳಿ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿದ್ದಾರೆ.

ಮೃತರನ್ನು ಹಳೆಯಂಗಡಿ ಕದಿಕೆ ನಿವಾಸಿ ಇಮ್ತಿಯಾಜ್ (39) ಎಂದು ಗುರುತಿಸಲಾಗಿದೆ. ಮೃತ ಇಮ್ತಿಯಾಜ್ ಶಿಪ್ಪಿಂಗ್ ಕಂಪೆನಿಯೊಂದರಲ್ಲಿ ಚಾಲಕರಾಗಿದ್ದು, ಬೆಳಗ್ಗೆ ಪಣಂಬೂರಿನ ತನ್ನ ಲಾರಿಯ ಕಚೇರಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಚಿತ್ರಾಪುರ ದ್ವಾರ ಹೋಟೆಲ್ ಮುಂಭಾಗ ಯೂ-ಟರ್ನ್ ಪಡೆದುಕೊಳ್ಳುತ್ತಿದ್ದಾಗ ಹಿಂದಿನಿಂದ ಬರುತ್ತಿದ್ದ ಲಾರಿ ಢಿಕ್ಕಿ ಹೊಡೆಯಿತೆನ್ನಲಾಗಿದೆ. ಪರಿಣಾಮ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡ ಅವರನ್ನು ಸಾರ್ವಜನಿಕರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಮೃತರು ಪತ್ನಿ, ಮೂವರು ಪುತ್ರರನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Edited By : PublicNext Desk
Kshetra Samachara

Kshetra Samachara

03/11/2026 11:40 am

Cinque Terre

464

Cinque Terre

0

ಸಂಬಂಧಿತ ಸುದ್ದಿ