ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮದ್ದೂರು: ಜಗಳ ಬಿಡಿಸಲು ಹೋದ ಯುವಕನ ಕೊಲೆ

ಮದ್ದೂರು: ಹಣದ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಶಾಂತಗೊಳಿಸಲು ಮುಂದಾದ ಅಮಾಯಕ ಯುವಕನೊಬ್ಬ ದಾರುಣವಾಗಿ ಹತ್ಯೆಯಾಗಿರುವ ಘಟನೆ ಮದ್ದೂರು ಪಟ್ಟಣದ ಸಿದ್ಧಾರ್ಥ ನಗರದಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದೆ.

ವೆಲ್ಡಿಂಗ್ ವೃತ್ತಿ ಮಾಡಿಕೊಂಡಿದ್ದ ಸ್ಥಳೀಯ ನಿವಾಸಿ ಕುಮಾರ್ ಎಂಬುವವರ ಪುತ್ರ ನಂದನ್ (25) ಕೊಲೆಯಾದ ದುರ್ದೈವಿ.ಕೆಲಸದ ಹಣದ ವಹಿವಾಟಿಗೆ ಸಂಬಂಧಿಸಿದಂತೆ ರಘು ಹಾಗೂ ಪ್ರಕಾಶ್ ನಡುವೆ ಮಾತಿನ ಚಕಮಕಿ ನಡೆದು ಗಲಾಟೆ ತಾರಕಕ್ಕೇರಿತ್ತು. ಗಲಾಟೆ ನಡೆಯುತ್ತಿದ್ದ ಸ್ಥಳದಲ್ಲಿದ್ದ ನಂದನ್, ಪರಿಸ್ಥಿತಿಯನ್ನು ತಿಳಿಗೊಳಿಸಿ ಜಗಳ ಬಿಡಿಸಲು ಮಧ್ಯಪ್ರವೇಶಿಸಿದ್ದಾನೆ. ಆದರೆ, ಕ್ಷುಲ್ಲಕ ಜಗಳದಲ್ಲಿದ್ದ ಗುಂಪು ನಂದನ್ ಮೇಲೆಯೇ ತಿರುಗಿಬಿದ್ದಿದೆ ಎನ್ನಲಾಗಿದೆ.

​

ಈ ಸಂದರ್ಭದಲ್ಲಿ ಜಗಳದಲ್ಲಿ ಭಾಗಿಯಾಗಿದ್ದರೆನ್ನಲಾದ ಶಿವರಾಜು, ಧನುಷ್ ಹಾಗೂ ನಿಖಿಲ್ ಎಂಬುವವರ ಪೈಕಿ ಶಿವರಾಜು ಎಂಬಾತ ಏಕಾಏಕಿ 'ಡ್ರ್ಯಾಗನ್' ನಿಂದ ನಂದನ್ ಕುತ್ತಿಗೆಯ ಭಾಗಕ್ಕೆ ಆಳವಾಗಿ ಚುಚ್ಚಿ ಗಂಭೀರ ಗಾಯಗೊಳಿಸಿದ್ದಾನೆ.​ರಕ್ತದ ಮಡುವಿನಲ್ಲಿ ಬಿದ್ದಿದ್ದ ನಂದನ್‌ನನ್ನು ತಕ್ಷಣವೇ ಸ್ಥಳೀಯರು ಮದ್ದೂರು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ರು, ತೀವ್ರ ರಕ್ತಸ್ರಾವದಿಂದಾಗಿ ಆತ ಮೃತಪಟ್ಟಿದ್ದಾನೆ.​ಘಟನಾ ಸ್ಥಳ ಹಾಗೂ ಆಸ್ಪತ್ರೆಗೆ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಡಾ. ವಿ.ಜೆ. ಶೋಭಾರಾಣಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ತಿಳಿಯುತ್ತಿದ್ದಂತೆ ಆಸ್ಪತ್ರೆಯ ಆವರಣದಲ್ಲಿ ನೂರಾರು ಮಂದಿ ಸಾರ್ವಜನಿಕರು ಜಮಾಯಿಸಿದ್ದು, ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

​ಈ ಕುರಿತು ಮದ್ದೂರು ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Edited By : Vinayak Patil
PublicNext

PublicNext

03/11/2026 01:32 pm

Cinque Terre

4.66 K

Cinque Terre

0

ಸಂಬಂಧಿತ ಸುದ್ದಿ