ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾವಣಗೆರೆಯಲ್ಲಿ ಟ್ರಾನ್ಸ್‌ಫಾರ್ಮರ್ ಬ್ಲಾಸ್ಟ್: ಗುಜರಿ ಅಂಗಡಿ, ಎರಡು ವಾಹನಗಳು ಭಸ್ಮ

ದಾವಣಗೆರೆ : ನಗರದ ಕೆಟಿಜೆ ನಗರದ 8 ನೇ ಕ್ರಾಸ್‌ನಲ್ಲಿ ಟ್ರಾನ್ಸ್‌ಫಾರ್ಮರ್ (ಟಿಸಿ) ಸ್ಪೋಟಗೊಂಡು ಅಗ್ನಿ ಅವಘಡ ಸಂಭವಿಸಿದ್ದು, ಸ್ಥಳೀಯ ಗುಜರಿ ಅಂಗಡಿ, ಎರಡು ವಾಹನಗಳು ಹಾಗೂ ಸಮೀಪದ ಮನೆಗಳಿಗೆ ಬೆಂಕಿ ಆವರಿಸಿ ಸಂಪೂರ್ಣವಾಗಿ ಭಸ್ಮವಾಗಿವೆ. ಈ ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿಪಾಸ್ತಿ ನಷ್ಟವಾಗಿದೆ.

ಟ್ರಾನ್ಸ್‌ಫಾರ್ಮರ್ ಏಕಾಏಕಿ ಶಾರ್ಟ್ ಸರ್ಕ್ಯೂಟ್‌ನಿಂದ ಬ್ಲಾಸ್ಟ್ ಆದ ತಕ್ಷಣ ಬೆಂಕಿಯ ಕೆನ್ನಾಲಿಗೆ ಪಕ್ಕದಲ್ಲಿದ್ದ ಗುಜರಿ ಅಂಗಡಿಗೆ ಆವರಿಸಿದೆ. ಕ್ಷಣಾರ್ಧದಲ್ಲಿ ಬೆಂಕಿ ತೀವ್ರಗೊಂಡು ರೌದ್ರಾವತಾರ ತಾಳಿದ್ದರಿಂದ ಸ್ಥಳದಲ್ಲಿದ್ದ ಜನರು ಪ್ರಾಣಭಯದಿಂದ ಚೆಲ್ಲಾಪಿಲ್ಲಿಯಾಗಿ ಓಡಿಹೋಗುವ ಭಯಾನಕ ದೃಶ್ಯಗಳು ಹತ್ತಿರದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಈ ಘಟನೆ ಇಡೀ ದಾವಣಗೆರೆ ಜನತೆಯನ್ನು ಬೆಚ್ಚಿಬೀಳಿಸಿದೆ.

ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಸತತ ಎರಡು ಗಂಟೆಗೂ ಹೆಚ್ಚು ಕಾಲ ಹರಸಾಹಸ ಪಟ್ಟು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಿಬ್ಬಂದಿಯ ಸಮಯಪ್ರಜ್ಞೆಯಿಂದಾಗಿ ಅಕ್ಕಪಕ್ಕದ ನಿವಾಸಿಗಳಿಗೆ ಉಂಟಾಗಬಹುದಾಗಿದ್ದ ದೊಡ್ಡ ಮಟ್ಟದ ಅಪಾಯ ತಪ್ಪಿದಂತಾಗಿದೆ.ಘಟನಾ ಸ್ಥಳಕ್ಕೆ ಕೆಟಿಜೆ ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Edited By :
PublicNext

PublicNext

03/11/2026 03:35 pm

Cinque Terre

3.45 K

Cinque Terre

0

ಸಂಬಂಧಿತ ಸುದ್ದಿ