ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರು:ಭೀಕರ ರಸ್ತೆ ಅಪಘಾತಕ್ಕೆ ಇಬ್ಬರು ಯುವಕರು ಬಲಿ

ಮೈಸೂರು: ರಾಗಿ ತೆನೆ ಬಿಡಿಸುವ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕಿರಂಗೂರು ಗ್ರಾಮದ ಗೇಟ್ ಬಳಿ ನಡೆದಿದೆ.

ಮಾಸ್ತಿಗುಡಿಯ ಶಿವಪ್ಪ ಅವರ ಪುತ್ರ ಪ್ರತಾಪ್ (24) ಹಾಗೂ ಭೀಮನಕಟ್ಟೆಯ ಪುನೀತ್ (25) ಮೃತಪಟ್ಟ ದುರ್ದೈವಿಗಳು.

ಕಿರಂಗೂರು ಕಡೆಯಿಂದ ಬರುತ್ತಿದ್ದ ಬೈಕ್‌ಗೆ ಹನಗೋಡು ಕಡೆಯಿಂದ ಬರುತ್ತಿದ್ದ ರಾಗಿ ತೆನೆ ಬಿಡಿಸುವ ವಾಹನ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರರಾದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nirmala Aralikatti
Kshetra Samachara

Kshetra Samachara

03/11/2026 04:09 pm

Cinque Terre

1.52 K

Cinque Terre

0

ಸಂಬಂಧಿತ ಸುದ್ದಿ