ಮೈಸೂರು: ಕಾಲೇಜಿಗೆ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿರುವ ಘಟನೆ ನಗರದ ದೊಡ್ಡ ಗಡಿಯಾರ ವೃತ್ತದ ಬಳಿ ನಡೆದಿದೆ.
ಎನ್.ಆರ್. ಮೊಹಲ್ಲಾ ನಿವಾಸಿ ವೈಷ್ಣವಿ ವಿ. ಮೃತಪಟ್ಟ ವಿದ್ಯಾರ್ಥಿನಿ. ನಗರದ ಸದ್ವಿದ್ಯಾ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವೈಷ್ಣವಿ, ತಂದೆ ವೆಂಕಟೇಶ್ (65) ಅವರೊಂದಿಗೆ ಬೈಕ್‌ನಲ್ಲಿ ಕಾಲೇಜಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಈ ವೇಳೆ ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ವೈಷ್ಣವಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ತಂದೆ ವೆಂಕಟೇಶ್ ಅವರಿಗೂ ತೀವ್ರ ಗಾಯಗಳಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳೀಯರಲ್ಲಿ ಶೋಕ ಆವರಿಸಿದೆ.
Kshetra Samachara
03/11/2026 04:21 pm
LOADING...