ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಾಲಬಾಧೆ ತಾಳಲಾರದೆ ಜಮೀನಿನಲ್ಲೇ ರೈತ ಆತ್ಮಹತ್ಯೆಗೆ ಶರಣು

ಶಿವಮೊಗ್ಗ: ಸಾಲಬಾಧೆ ಹಾಗೂ ಖಾಸಗಿ ಫೈನಾನ್ಸ್ ಕಂಪನಿ ನೀಡಿದ ಕಿರುಕುಳಕ್ಕೆ ಬೇಸತ್ತು ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಸೈದರಕಲ್ಲಹಳ್ಳಿಯಲ್ಲಿ ನಡೆದಿದೆ.

ಸೈದರಕಲ್ಲಹಳ್ಳಿ ನಿವಾಸಿ ಮಹೇಶ್ (36) ಆತ್ಮಹತ್ಯೆಗೆ ಶರಣಾದ ದುರ್ದೈವಿ ರೈತ.

ಮೃತ ಮಹೇಶ್ ಅವರು ತಮ್ಮ ಜಮೀನು ಅಭಿವೃದ್ಧಿ ಹಾಗೂ ಹೊಸ ಮನೆ ನಿರ್ಮಾಣಕ್ಕಾಗಿ ವಿವಿಧ ಖಾಸಗಿ ಫೈನಾನ್ಸ್ ಕಂಪನಿಗಳಿಂದ ಸುಮಾರು 7 ಲಕ್ಷ ಹಾಗೂ ಸ್ಥಳೀಯವಾಗಿ 6 ಲಕ್ಷ ಸೇರಿ ಒಟ್ಟು 13 ಲಕ್ಷ ರೂಪಾಯಿ ಕೈಸಾಲ ಮಾಡಿಕೊಂಡಿದ್ದರು.

ಇತ್ತೀಚೆಗೆ ಸಾಲ ಮರುಪಾವತಿ ಮಾಡಲು ಸಾಧ್ಯವಾಗದಿದ್ದಾಗ, ಖಾಸಗಿ ಫೈನಾನ್ಸ್ ಕಂಪನಿಯ ಸಿಬ್ಬಂದಿ ಮನೆಗೆ ಬಂದು ಬೀಗ ಜಡಿದಿದ್ದರು ಎನ್ನಲಾಗಿದೆ. ಸಾರ್ವಜನಿಕವಾಗಿ ಎದುರಾದ ಈ ಮಾನಸಿಕ ಕಿರುಕುಳ ಹಾಗೂ ಸಾಲದ ಹೊರೆಯಿಂದ ಮನನೊಂದ ಮಹೇಶ್, ಜಿಗುಪ್ಸೆಗೊಂಡು ಮಂಗಳವಾರ ಮನೆಯಲ್ಲಿ ನೇಣು ಬಿಗಿದುಕೊಂಡು ಪ್ರಾಣ ತೆಗೆದುಕೊಂಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Edited By : PublicNext Desk
Kshetra Samachara

Kshetra Samachara

03/11/2026 04:51 pm

Cinque Terre

500

Cinque Terre

0

ಸಂಬಂಧಿತ ಸುದ್ದಿ