ಶಿರಸಿ: ಭಾರತ ಮಳೆ ಆಧಾರಿತ ದೇಶ. ಇಲ್ಲಿನ ರೈತರು ಮಳೆಯನ್ನೇ ಆಶ್ರಯಿಸಿ ತಮ್ಮ ದಿನನಿತ್ಯದ ಜೀವನವನ್ನು ನಿರ್ವಹಿಸುತ್ತಾರೆ. ರೈತರು ಸಮೃದ್ಧವಾಗಿದ್ದರೆ ದೇಶ ಸಮೃದ್ಧವಾಗಿರುತ್ತದೆ. ಈ ಸಲ ಮಳೆ ಅಭಾವದಿಂದ ರೈತರು ಸಾಕಷ್ಟು ಸಂಕಷ್ಟದಲ್ಲಿದ್ದಾರೆ, ಅವರಿಗೆ ಸರ್ಕಾರ ಮತ್ತು ಬ್ಯಾಂಕುಗಳು ನೆರವಿಗೆ ಬರಬೇಕು ಎಂದು ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ದಿಲಿಷ್ ಶಶಿ ಅಭಿಪ್ರಾಯಪಟ್ಟರು.
ಅವರು ನಗರದ ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನದಲ್ಲಿ ಉತ್ತರ ಕನ್ನಡ ಜಿಲ್ಲೆಯ ಲೀಡ್ ಬ್ಯಾಂಕ್ ಹಾಗೂ ಜಿಲ್ಲಾ ಪಂಚಾಯತ್ ಕಾರವಾರ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಬೃಹತ್ ಸಾಲ ಜಾಗೃತಿ ಮೇಳ ಹಾಗೂ ಆರ್ಥಿಕ ಸಾಕ್ಷರತೆ ಮತ್ತು ಸೇರ್ಪಡೆ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಈ ಬೃಹತ್ ಸಾಲ ಜಾಗೃತಿ ಮೇಳದಲ್ಲಿ ಎಲ್ಲಾ ರಾಷ್ಟ್ರೀಕೃತ ಬ್ಯಾಂಕುಗಳು ಹಾಗೂ ಖಾಸಗಿ ಬ್ಯಾಂಕುಗಳು ಭಾಗವಹಿಸಿ ರೈತರಿಗೆ ಹಾಗೂ ಸಾರ್ವಜನಿಕರಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರ ನೀಡುತ್ತಿರುವ ವಿವಿಧ ಯೋಜನೆಗಳ ಸಾಲ ಸೌಲಭ್ಯ, ಸಬ್ಸಿಡಿ ಮತ್ತು ಸಾಲ ಪಡೆಯುವ ಬಗ್ಗೆ ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಡಿ.ಪಿ. ಸತೀಶ್, ಸಮಾಜ ಕಲ್ಯಾಣ ಅಧಿಕಾರಿ ಬಸವರಾಜ ಬಂಡೆರ, ಸಿಡಿಪಿಒ ನಂದಕುಮಾರ್, ಅಶೋಕ ಭಾಂಡಗೆ, ಸುಹಾಸ್, ಲಕ್ಷ್ಮೀಕಾಂತ್ ವಾಸುದೇವ್, ಉತ್ತರ ಕನ್ನಡ ಜಿಲ್ಲೆಯ ಲೀಡ್ ಬ್ಯಾಂಕ್ ಡಿಸ್ಟ್ರಿಕ್ಟ್ ಮ್ಯಾನೇಜರ್ ರಾಜಪ್ಪ ಗೌಳಿ, ಸುಶೀಲ್ ನಾಯ್ಕ್ ಸೇರಿದಂತೆ ಅನೇಕರು ಇದ್ದರು.
Kshetra Samachara
03/11/2026 05:07 pm
LOADING...