ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾಸನಾಂಬೆ ಜಾತ್ರೆಯಲ್ಲಿ ಕಬ್ಬಡ್ಡಿ ಆಡಿ, ಚಾಲನೆ ನೀಡಿದ ಸಚಿವ ಶಿವಲಿಂಗೇಗೌಡ

ಹಾಸನ: ಶ್ರೀ ಹಾಸನಾಂಬ ದೇವಿ ದರ್ಶನ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಅಂಗವಾಗಿ ಮಹಾನಗರ ಪಾಲಿಕೆ ಮೈದಾನದಲ್ಲಿ ಕಬ್ಬಡಿ ಪಂದ್ಯಾವಳಿ ಹಮ್ಮಿಕೊಳ್ಳಲಾಗಿತ್ತು. ಇದರಲ್ಲಿ ಅಬಕಾರಿ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಎಂ. ಶಿವಲಿಂಗೇಗೌಡ ಅವರು ರೈಡ್‌ ಮಾಡುವ ಮೂಲಕ ಆಟಗಾರರನ್ನು ಹುರಿದುಂಬಿಸಿದರು.

ಸಚಿವರ ಈ ಸಾಹಸಕ್ಕೆ ನೆರೆದಿದ್ದ ಜನಸ್ತೋಮ ಸಿಳ್ಳೆ ಹಾಗೂ ಚಪ್ಪಾಳೆಗಳ ಮೂಲಕ ಅಭೂತಪೂರ್ವ ಬೆಂಬಲ ಸೂಚಿಸಿತು. ಜಿಲ್ಲಾಧಿಕಾರಿ ಲತಾಕುಮಾರಿ ಅವರೂ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಹಾಸನಾಂಬೆ ದರ್ಶನೋತ್ಸವದ ಇತಿಹಾಸದಲ್ಲೇ ರಾಜ್ಯ ಮತ್ತು ರಾಷ್ಟ್ರಮಟ್ಟದ ಕ್ರೀಡಾಕೂಟಗಳನ್ನು ಆಯೋಜಿಸಿರುವುದು ಇದೇ ಮೊದಲಾಗಿದ್ದು, ಈ ಕಬಡ್ಡಿ ಪಂದ್ಯಾವಳಿಯು ಜಾತ್ರೆಯ ಸಡಗರಕ್ಕೆ ಮತ್ತಷ್ಟು ಮೆರುಗು ನೀಡಿದೆ.

Edited By :
PublicNext

PublicNext

03/11/2026 06:19 pm

Cinque Terre

3.84 K

Cinque Terre

0

ಸಂಬಂಧಿತ ಸುದ್ದಿ