ಹುಬ್ಬಳ್ಳಿಯ ಬೈರಿದೇವರಕೊಪ್ಪದಲ್ಲಿ ಕುದುರೆ ಕಳ್ಳತನ ಮಾಡಿದ ಇಬ್ಬರು ಯುವಕರ ಕೃತ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಸೋಮವಾರ ಮಧ್ಯಾಹ್ನ ಬೈಕ್‌ನಲ್ಲಿ ಬಂದ ಇಬ್ಬರು ಯುವಕರು, ಉಜ್ವಲ ಎಂಬುವವರ ಮನೆಯ ಮುಂದೆ ಕಟ್ಟಿಹಾಕಿದ್ದ ಕುದುರೆಯನ್ನು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾರೆ.
ಮನೆಯ ಮುಂದೆ ಕಟ್ಟಿದ್ದ ಕುದುರೆಯನ್ನೇ ಟಾರ್ಗೆಟ್ ಮಾಡಿದ ಖದೀಮರು, ಯಾರಿಗೂ ಗೊತ್ತಾಗದಂತೆ ಕುದುರೆಯನ್ನು ಕದ್ದುಕೊಂಡು ಹೋಗಿದ್ದಾರೆ. ಈ ಕೃತ್ಯ ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದೆ.
ನವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕುದುರೆ ಕಳ್ಳತನ ಮಾಡಿದ ಖದೀಮರನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕಿದೆ.
ವಿನಯ ರೆಡ್ಡಿ ಪಬ್ಲಿಕ್ ನೆಕ್ಸ್ಟ್
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
03/11/2026 06:31 pm
LOADING...