ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಬಳ್ಳಾಪುರ : ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೆ ಒತ್ತಾಯಿಸಿ ವಕೀಲರ ಸಂಘದಿಂದ ಪ್ರತಿಭಟನೆ

ಭಾಗ್ಯನಗರ : ರಾಜ್ಯದಲ್ಲಿ ವಕೀಲರ ಮೇಲೆ ನಡೆಯುತ್ತಿರುವ ಹಲ್ಲೆ ಹಾಗೂ ದೌರ್ಜನ್ಯ ಘಟನೆಗಳನ್ನು ಖಂಡಿಸಿ, ವಕೀಲರ ಸಂರಕ್ಷಣಾ ಕಾಯ್ದೆಯನ್ನು ಜಾರಿಗೆ ತರಬೇಕೆಂದು ಆಗ್ರಹಿಸಿ ರಾಜ್ಯ ವಕೀಲರ ಪರಿಷತ್ ವತಿಯಿಂದ ರಾಜ್ಯಾದ್ಯಂತ ನಡೆಯುತ್ತಿರುವ ಪ್ರತಿಭಟನೆಗೆ ಬಾಗೇಪಲ್ಲಿ ವಕೀಲರ ಸಂಘ ಸಂಪೂರ್ಣ ಬೆಂಬಲ ಸೂಚಿಸಿದೆ ಎಂದು ಸಂಘದ ಅಧ್ಯಕ್ಷ ಜೆ.ಎನ್. ಮಂಜುನಾಥ್ ತಿಳಿಸಿದರು.

ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯದ ಕಲಾಪಗಳನ್ನು ಬಹಿಷ್ಕರಿಸಿದ ವಕೀಲರು, ನ್ಯಾಯಾಲಯದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ನಂತರ ತಾಲ್ಲೂಕು ಆಡಳಿತ ಕಚೇರಿಗೆ ತೆರಳಿ ಗ್ರೇಡ್-2 ತಹಶೀಲ್ದಾರ್ ಮೋಹನ್ ಬಾಬು ಅವರಿಗೆ ಮನವಿ ಪತ್ರ ಸಲ್ಲಿಸಿದರು. ಈ ಮನವಿಯನ್ನು ತಮ್ಮ ಮೂಲಕ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಕಾನೂನು ಸಚಿವರಿಗೆ ಸಲ್ಲಿಸಲಾಗುತ್ತಿದೆ ಎಂದು ವಕೀಲರ ಸಂಘದ ಅಧ್ಯಕ್ಷರು ತಿಳಿಸಿದರು.

ಈ ಸಂದರ್ಭದಲ್ಲಿ ವಕೀಲರ ಸಂಫದ ಉಪಾಧ್ಯಕ್ಷ ರವಿ, ಕಾರ್ಯದರ್ಶಿ ಜಯಪ್ಪ, ಮಾಜಿ ಅಧ್ಯಕ್ಷ ಎ. ನಂಜುಂಡಪ್ಪ, ಮುಸ್ಟಾಕ್ ಅಹ್ಮದ್, ಹಿರಿಯ ವಕೀಲರಾದ ಕರುಣಾಸಾಗರರೆಡ್ಡಿ, ಎಂ ಕೆ ಅಲ್ಲಾಬಕಾಶ್,ವಕೀಲರಾದ ಪ್ರಸನ್ನ,ಸತೀಶ್,ಬಾಬು,ಬಾಲು ನಾಯ್ಕ್ ಸೇರಿದಂತೆ ಮತ್ತಿತರರು ಇದ್ದರು.

ಚಿಕ್ಕತೇಕಹಳ್ಳಿ ಡಿ ಶಿವಕುಮಾರ್, ಪಬ್ಲಿಕ್ ನೆಕ್ಸ್ಟ್, ಚಿಕ್ಕಬಳ್ಳಾಪುರ

Edited By :
PublicNext

PublicNext

03/11/2026 06:59 pm

Cinque Terre

2.81 K

Cinque Terre

0

ಸಂಬಂಧಿತ ಸುದ್ದಿ