ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸವದತ್ತಿ: KSRTC ಬಸ್ - ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ, ಇಬ್ಬರು ಚಾಲಕರು ಗಂಭೀರ

ಸವದತ್ತಿ: ಸವದತ್ತಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, KSRTC ಬಸ್ ಹಾಗೂ ಟಾಟಾ 407 ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಚಾಲಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನವಿಲು ತೀರ್ಥ ಬಳಿ ನಡೆದಿದೆ.

ಸವದತ್ತಿ ತಾಲೂಕಿನ ನವಿಲು ತೀರ್ಥ ಜಲಾಶಯದ ಆಂಜನೇಯ ದೇವಸ್ಥಾನದ ಬಳಿ ಈ ಅಪಘಾತ ಸಂಭವಿಸಿದೆ. ಗೋಕಾಕ ಕಡೆಯಿಂದ ಮುನವಳ್ಳಿ ಮಾರ್ಗವಾಗಿ ಹಾವೇರಿ ಕಡೆಗೆ ತೆರಳುತ್ತಿದ್ದ KSRTC ಬಸ್ ಹಾಗೂ ಸವದತ್ತಿ ಕಡೆಯಿಂದ ಮುನವಳ್ಳಿ ಕಡೆಗೆ ಬರುತ್ತಿದ್ದ ಟಾಟಾ 407 ಗೂಡ್ಸ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳ ಮುಂಭಾಗ ನುಜ್ಜು ಗುಜ್ಜಾಗಿದೆ. ಬಸ್ ಚಾಲಕ ಹಾಗೂ ಟಾಟಾ ಗೂಡ್ಸ್ ಚಾಲಕನ ಕೈ-ಕಾಲುಗಳಿಗೆ ಗಂಭೀರ ಗಾಯಗಳಾಗಿವೆ. ತಕ್ಷಣ ಸ್ಥಳೀಯರು ಗಾಯಾಳುಗಳನ್ನು ಆಂಬುಲೆನ್ಸ್ ಮೂಲಕ ಸವದತ್ತಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಘಟನೆ ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Edited By :
PublicNext

PublicNext

03/11/2026 07:08 pm

Cinque Terre

3.67 K

Cinque Terre

0

ಸಂಬಂಧಿತ ಸುದ್ದಿ