ಬೆಂಗಳೂರು - SIR ಮತ್ತು ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ನವೆಂಬರ್ 5 ರಂದು ಇಂಡಿಯಾ ಒಕ್ಕೂಟ ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ದೊಡ್ಡ ಹೋರಾಟವನ್ನ ಮಾಡಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು
ಇತ್ತೀಚೆಗೆ ದೆಹಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಬೃಹತ್ ಪ್ರತಿರೋಧ ವ್ಯಕ್ತವಾಗಿದ್ದು, ಅದರ ಮುಂದುವರಿದ ಭಾಗವಾಗಿ ಬೆಂಗಳೂರಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ .ಇಂಡಿಯಾ ಒಕ್ಕೂಟದ ಎಲ್ಲಾ ನಾಯಕರು ಪ್ರತಿಭಟನೆಗೆ ಕರೆ ನೀಡಿದ್ದು, ದೇಶದಾದ್ಯಂತ ಹೋರಾಟ ನಡೆಯಲಿದೆ. ತಾಲೂಕು ಮಟ್ಟದಲ್ಲಿಯೂ ಪ್ರತಿಭಟನೆಗಳನ್ನು ಆಯೋಜಿಸಲಾಗುವುದು.ಸಂವಿಧಾನಿಕ ಸಂಸ್ಥೆಗಳನ್ನು ತನ್ನ ಹಿಡಿತದಲ್ಲಿಟ್ಟುಕೊಳ್ಳಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿರುವ ಹರಿಪ್ರಸಾದ್, ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಎಚ್ಚರಿಕೆ ನೀಡಿದ್ದಾರೆ
PublicNext
03/11/2026 08:10 pm
LOADING...