ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರಿನಲ್ಲಿ ರೈತರ ಕಿಚ್ಚು, ಕಬ್ಬಿನ ದರ ನಿಗದಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಮೈಸೂರು : ಕಬ್ಬಿನ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಮೈಸೂರಿನಲ್ಲಿ ರೈತರ ಆಕ್ರೋಶ ಭುಗಿಲೆದ್ದಿದೆ. ಕಬ್ಬು ಬೆಳೆಗಾರರ ಸಮನ್ವಯ ಸಮಿತಿ ನೇತೃತ್ವದಲ್ಲಿ ನೂರಾರು ರೈತರು ಬೃಹತ್ ಪ್ರತಿಭಟನೆ ನಡೆಸಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕಬ್ಬಿನ ಹೊರೆ ಹೊತ್ತು ಬೀದಿಗಿಳಿದ ರೈತರು ಬನ್ನೂರು ರಸ್ತೆಯಲ್ಲಿ ರಸ್ತೆ ತಡೆ ನಡೆಸಿ, ರಸ್ತೆಯಲ್ಲೇ ಮಲಗಿ ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದರು. ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಸರ್ಕಾರಗಳು ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ರೈತರು, ಆಡಳಿತ ಪಕ್ಷದ ಜೊತೆಗೆ ವಿರೋಧ ಪಕ್ಷಗಳ ವಿರುದ್ಧವೂ ಅಸಮಾಧಾನ ಹೊರಹಾಕಿದರು.

ಕಬ್ಬಿನ ಬೆಲೆ ನಿಗದಿ ವಿಚಾರದಲ್ಲಿ ರಾಜಕೀಯ ಪಕ್ಷಗಳು ರೈತರ ಹಿತಾಸಕ್ತಿಯನ್ನು ಕಡೆಗಣಿಸುತ್ತಿವೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿದರು. ರೈತ ಮುಖಂಡರಾದ ಬಡಗಲಪುರ ನಾಗೇಂದ್ರ, ಹಳ್ಳಿಕೆರೆ ಭಾಗ್ಯರಾಜ್, ಕುರುಬೂರು ಶಾಂತಕುಮಾರ್, ಮಂಜುಕಿರಣ್ ಹಾಗೂ ಹೊಸಕೋಟೆ ಬಸವರಾಜು ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸಿ ರೈತರ ಬೇಡಿಕೆ ಈಡೇರಿಸುವವರೆಗೂ ಹೋರಾಟವನ್ನು ಹಿಂಪಡೆಯುವುದಿಲ್ಲ ಎಂದು ರೈತ ಮುಖಂಡರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

Edited By :
PublicNext

PublicNext

03/11/2026 08:11 pm

Cinque Terre

5.86 K

Cinque Terre

0

ಸಂಬಂಧಿತ ಸುದ್ದಿ