ಯಲ್ಲಾಪುರ: ಬೇಡ್ತಿ–ಅಘನಾಶಿನಿ ನದಿ ಜೋಡಣೆ ಯೋಜನೆಯಿಂದ ಪರಿಸರದ ಮೇಲೆ ಉಂಟಾಗಬಹುದಾದ ಗಂಭೀರ ಪರಿಣಾಮಗಳು, ಪಶ್ಚಿಮ ಘಟ್ಟಗಳ ಜೀವವೈವಿಧ್ಯಕ್ಕೆ ಎದುರಾಗಬಹುದಾದ ಅಪಾಯಗಳು ಹಾಗೂ ಸ್ಥಳೀಯ ಜನಜೀವನದ ಮೇಲಾಗುವ ದುಷ್ಪರಿಣಾಮಗಳನ್ನು ಹೋಗಲಾಡಿಸಲು ಎಲ್ಲಾ ರಾಜಕೀಯ ಪಕ್ಷಗಳು ಪಕ್ಷಾತೀತವಾಗಿ ಹೋರಾಟಕ್ಕೆ ಕೈಜೋಡಿಸಬೇಕು ಎಂದು ಶಾಸಕ ಶಿವರಾಮ ಹೆಬ್ಬಾರ್
ಹೇಳಿದರು.
ಅವರು ಯಲ್ಲಾಪುರ ಪಟ್ಟಣದಲ್ಲಿ ನಡೆದ ಬೇಡ್ತಿ–ಅಘನಾಶಿನಿ ನದಿ ಜೋಡಣೆ ಯೋಜನೆಯನ್ನು ವಿರೋಧಿಸಿ, ನಾಡಿನ ನೆಲ, ಜಲ, ಅರಣ್ಯ ಹಾಗೂ ನೈಸರ್ಗಿಕ ಸಂಪತ್ತಿನ ಸಂರಕ್ಷಣೆಗಾಗಿ ಮಂಗಳವಾರ ನಡೆದ ರಾಷ್ಟ್ರೀಯ ಹೆದ್ದಾರಿ ತಡೆ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.
ಅಲ್ಲದೆ ನಮ್ಮ ನಾಡಿನ ನೈಸರ್ಗಿಕ ಸಂಪತ್ತನ್ನು ಉಳಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಈ ಹೋರಾಟದಲ್ಲಿ ಪಕ್ಷಭೇದ ಮರೆತು ಎಲ್ಲರೂ ಒಗ್ಗಟ್ಟಿನಿಂದ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಈ ಬೃಹತ್ ರಸ್ತೆ ತಡೆ ಪ್ರತಿಭಟನೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು, ವಿವಿಧ ಸಂಘಟನೆಗಳ ಮುಖಂಡರು ಹಾಗೂ ಪರಿಸರ ಹೋರಾಟಗಾರರು ಭಾಗವಹಿಸಿ ಯೋಜನೆಯ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕರೂಗಳಾದ ಭೀಮಣ್ಣ ನಾಯ್ಕ, ದಿನಕರ ಶೆಟ್ಟಿ, ಮಾಜಿ ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ, ಬೇಡ್ತಿ–ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿಯ ಅಧ್ಯಕ್ಷ ಅನಂತ್ ಆಶೀಸರ ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು, ಪರಿಸರ ಹೋರಾಟಗಾರರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
Kshetra Samachara
03/11/2026 08:14 pm
LOADING...