ಚಿಕ್ಕಮಗಳೂರು: ಹಳೆಯ ದ್ವೇಷದ ಹಿನ್ನೆಲೆಯಲ್ಲಿ 2014ರಲ್ಲಿ ನಡೆದಿದ್ದ ಚಿಕ್ಕಮಗಳೂರು ತಾಲೂಕಿನ ಕುರುವಂಗಿ ಗ್ರಾಮದ ರಮೇಶ್ ಕೊಲೆ ಪ್ರಕರಣದಲ್ಲಿ, ಆರೋಪಿ ಗೋಪಾಲನಿಗೆ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಜುಲೈ 30, 2014ರಂದು ಕುರುವಂಗಿ ದೊಡ್ಡಕೆರೆ ಬಳಿ ಆರೋಪಿ ಗೋಪಾಲ, ಮೃತ ರಮೇಶ್ ಜೊತೆ ಮದ್ಯಪಾನ ಮಾಡಿ ಹಳೆ ದ್ವೇಷದಿಂದ ಬಿದಿರಿನ ದೊಣ್ಣೆಯಿಂದ ತಲೆಗೆ ಬಡಿದು ಕೊಲೆ ಮಾಡಿದ್ದನು. ಬಳಿಕ ಸಾಕ್ಷ್ಯ ನಾಶಪಡಿಸಲು ಶವವನ್ನು ಗೋಣಿಚೀಲದಲ್ಲಿ ತುಂಬಿ ಕೆರೆಯಲ್ಲಿ ಹೂತುಹಾಕಿದ್ದನು. ಈ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯವು ಇದೀಗ ಕೊಲೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ಪ್ರಕಟಿಸಿದ್ದು, ಮೃತರ ಮಗನಿಗೆ 50 ಸಾವಿರ ರೂ. ಪರಿಹಾರ ನೀಡುವಂತೆಯೂ ಆದೇಶಿಸಿದೆ. ಅಂದಿನ ಡಿವೈಎಸ್ಪಿ ರಮೇಶಕುಮಾರ್ ತನಿಖೆ ನಡೆಸಿ ದೋಷಾರೋಪಣಾ ಪತ್ರ ಸಲ್ಲಿಸಿದ್ದು, ಸರ್ಕಾರಿ ಅಭಿಯೋಜಕ ಹೆಚ್.ಎಸ್. ಲೋಹಿತಾಶ್ವಾಚಾರ್ ವಾದ ಮಂಡಿಸಿದ್ದರು.
Kshetra Samachara
03/11/2026 08:42 pm
LOADING...