ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಡಿ. ಸಿ. ಕಚೇರಿ ಗೇಟ್ ಬಳಿ ರೈತರ ಆಕ್ರೋಶ, ಪೊಲೀಸರೊಂದಿಗೆ ವಾಗ್ವಾದ

ಬೆಳಗಾವಿ: ಕಬ್ಬು ಬೆಳೆಗೆ ಸೂಕ್ತ ಬೆಲೆ ನಿಗದಿಪಡಿಸುವ ಸಂಬಂಧ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಬೇಕಿದ್ದ ಮಹತ್ವದ ಸಭೆ ವಿಳಂಬವಾಗಿದ್ದರಿಂದ ರೈತರು ಆಕ್ರೋಶಗೊಂಡು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ಮಧ್ಯಾಹ್ನ 3 ಗಂಟೆಗೆ ಆರಂಭವಾಗಬೇಕಿದ್ದ ಸಭೆ ನಿಗದಿತ ಸಮಯಕ್ಕೆ ಪ್ರಾರಂಭವಾಗದ ಹಿನ್ನೆಲೆಯಲ್ಲಿ ವಿವಿಧ ಭಾಗಗಳಿಂದ ಆಗಮಿಸಿದ್ದ ರೈತರು ಜಿಲ್ಲಾಧಿಕಾರಿ ಕಚೇರಿಯ ಮುಖ್ಯ ಗೇಟ್ ಬಳಿ ಜಮಾಯಿಸಿ, ಸಭೆಗೆ ಎಲ್ಲ ರೈತ ಮುಖಂಡರಿಗೂ ಅವಕಾಶ ಕಲ್ಪಿಸುವಂತೆ ಆಗ್ರಹಿಸಿದರು.

ಈ ವೇಳೆ ಕೆಲ ರೈತರು ಜಿಲ್ಲಾಧಿಕಾರಿ ಕಚೇರಿಯೊಳಗೆ ಪ್ರವೇಶಿಸಲು ಯತ್ನಿಸಿದ್ದು, ಪೊಲೀಸರು ಮತ್ತು ರೈತರ ನಡುವೆ ಮಾತಿನ ಚಕಮಕಿ ನಡೆಯಿತು. ಗೇಟ್ ಬಳಿ ತಳ್ಳಾಟ, ನೂಕಾಟದ ಪರಿಸ್ಥಿತಿಯೂ ನಿರ್ಮಾಣವಾಯಿತು.

ಪರಿಸ್ಥಿತಿ ನಿಯಂತ್ರಿಸಲು ಡಿಸಿಪಿ ನಾರಾಯಣ ಬರಮನಿ ಸ್ಥಳಕ್ಕೆ ಭೇಟಿ ನೀಡಿ ರೈತರ ಮನವೊಲಿಸಲು ಪ್ರಯತ್ನಿಸಿದರು. 'ಯಾವುದನ್ನೂ ಕದ್ದುಮುಚ್ಚಿ ಮಾಡುವ ಉದ್ದೇಶವಿಲ್ಲ. ರೈತರ ಸಮಸ್ಯೆ ಬಗೆಹರಿಸಲು ಎಲ್ಲರೂ ಪ್ರಯತ್ನಿಸುತ್ತಿದ್ದಾರೆ. ಸಭೆಯನ್ನು ಸಂಜೆ 4.30ಕ್ಕೆ ಮುಂದೂಡಲಾಗಿದೆ. ಈಗಾಗಲೇ ಹಲವು ರೈತ ಮುಖಂಡರು ಸಭೆಯೊಳಗೆ ಇದ್ದಾರೆ' ಎಂದು ತಿಳಿಸಿ ಪ್ರತಿಭಟನಾನಿರತ ರೈತರನ್ನು ಸಮಾಧಾನಪಡಿಸಲು ಯತ್ನಿಸಿದರು.

ಇನ್ನೊಂದೆಡೆ, ಸಭಾಂಗಣದ ಒಳಗೂ ರೈತ ಮುಖಂಡರ ನಡುವೆ ಭಿನ್ನಾಭಿಪ್ರಾಯ ವ್ಯಕ್ತವಾಯಿತು. ವಿವಿಧ ಭಾಗಗಳಿಂದ ಆಗಮಿಸಿದ್ದ ರೈತರು ಎಲ್ಲರಿಗೂ ಸಭೆಯಲ್ಲಿ ಭಾಗವಹಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.

ರೈತ ಸಂಘಟನೆಗಳ ಮುಖಂಡರ ನಡುವೆಯೇ ಭಿನ್ನಾಭಿಪ್ರಾಯಗಳಿದ್ದ ಹಿನ್ನೆಲೆಯಲ್ಲಿ ಆಯ್ದ ಪ್ರಮುಖ ರೈತ ಮುಖಂಡರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಸಭೆ ನಡೆಸಲಾಯಿತು.

Edited By :
PublicNext

PublicNext

03/11/2026 09:10 pm

Cinque Terre

5.55 K

Cinque Terre

0

ಸಂಬಂಧಿತ ಸುದ್ದಿ