ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ರಾಜಕೀಯವೆಂದರೆ ಕೇವಲ ಅಧಿಕಾರವಲ್ಲ, ಸಾಮಾಜಿಕ ಜವಾಬ್ದಾರಿ: ಯುವಜನತೆಗೆ ಶಾಸಕ ತಮ್ಮಯ್ಯ ಕಿವಿಮಾತು

ಚಿಕ್ಕಮಗಳೂರು:ರಾಜಕೀಯವೆಂದರೆ ಕೇವಲ ಚುನಾವಣೆಯಲ್ಲಿ ಸ್ಪರ್ಧಿಸಿ ಅಧಿಕಾರ ಪಡೆಯುವುದಲ್ಲ; ಸಮಾಜದ ಸಮಸ್ಯೆಗಳನ್ನು ಅರಿತು, ಜನರ ಅಗತ್ಯಗಳಿಗೆ ಸ್ಪಂದಿಸಿ ಸಾರ್ವಜನಿಕ ಹಿತಾಸಕ್ತಿಗಾಗಿ ಧ್ವನಿ ಎತ್ತುವುದಾಗಿದೆ. ದೇಶದ ಭವಿಷ್ಯವನ್ನು ರೂಪಿಸುವಲ್ಲಿ ಯುವಜನರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು.

ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ನಗರದ ಜಿಲ್ಲಾ ಪಂಚಾಯಿತಿ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಯುವ ಸಂಸತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಜಾಪ್ರಭುತ್ವದ ಬಲವರ್ಧನೆಗೆ ಯುವಶಕ್ತಿಯ ಸಕ್ರಿಯ ಭಾಗವಹಿಸುವಿಕೆ ಅತ್ಯಗತ್ಯವಾಗಿದೆ. ಯುವಜನರು ಕೇವಲ ನಾಳಿನ ಭವಿಷ್ಯ ಮಾತ್ರವಲ್ಲ, ಇಂದಿನ ಸಮಾಜದ ಬದಲಾವಣೆಯ ಪ್ರಮುಖ ಶಕ್ತಿಯಾಗಿದ್ದಾರೆ ಎಂದರು.

ಇಂದಿನ ಯುವಜನರಲ್ಲಿ ರಾಜಕೀಯ ಅರಿವು, ನಾಯಕತ್ವ ಗುಣ ಹಾಗೂ ಸಾಮಾಜಿಕ ಜವಾಬ್ದಾರಿ ಬೆಳೆಸಲು ಯುವ ಸಂಸತ್ ಒಂದು ಮಹತ್ವದ ವೇದಿಕೆಯಾಗಿದೆ. ಯುವಜನರು ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಸಂವಿಧಾನದ ಮೌಲ್ಯಗಳನ್ನು ಪ್ರಾಯೋಗಿಕವಾಗಿ ತಿಳಿದುಕೊಳ್ಳಲು ಇದು ಬಹುದೊಡ್ಡ ಮಟ್ಟದಲ್ಲಿ ಸಹಕಾರಿಯಾಗಿದೆ. ನೈಜ ಸಂಸತ್ತಿನಂತೆಯೇ ಸಭಾಧ್ಯಕ್ಷರು, ಆಡಳಿತ ಹಾಗೂ ವಿರೋಧ ಪಕ್ಷದ ಸದಸ್ಯರನ್ನು ಒಳಗೊಂಡ ಈ ಕಲಾಪವು ನಿರುದ್ಯೋಗ, ಶಿಕ್ಷಣ, ಆರೋಗ್ಯ, ಮಹಿಳಾ ಸುರಕ್ಷತೆ, ಪರಿಸರ ಮತ್ತು ರೈತರ ಸಮಸ್ಯೆಗಳಂತಹ ಗಂಭೀರ ವಿಷಯಗಳ ಚರ್ಚೆಗೆ ಅವಕಾಶ ಕಲ್ಪಿಸುತ್ತದೆ. ಇದರಿಂದ ಯುವಜನರಲ್ಲಿ ಸಮಾಜದ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳುವ ಮನೋಭಾವ ಬೆಳೆಯುತ್ತದೆ ಎಂದು ಅಭಿಪ್ರಾಯಪಟ್ಟರು.

Edited By :
PublicNext

PublicNext

03/11/2026 09:51 pm

Cinque Terre

4.88 K

Cinque Terre

0

ಸಂಬಂಧಿತ ಸುದ್ದಿ