ನವಲಗುಂದ: ತಾಲೂಕಿನ ಯಮನೂರ ಗ್ರಾಮಕ್ಕೆ ಶಾಸಕ ಎನ್.ಹೆಚ್.ಕೋನರೆಡ್ಡಿ ಭೇಟಿ ನೀಡಿ ಉತ್ತರ ಕರ್ನಾಟಕದ ಪ್ರಮುಖ ಯೋಜನೆಯಾದ ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣ ಮತ್ತು ಶ್ರೀ ಚಾಂಗದೇವರ ಆರತಿ ಅಭಿವೃದ್ಧಿ ಕಾಮಗಾರಿಯನ್ನು ವೀಕ್ಷಿಸಿದರು.
ತಾಲೂಕಿನ ಐತಿಹಾಸಿಕ ಹಾಗೂ ಧಾರ್ಮಿಕ ಮಹತ್ವದ ಕ್ಷೇತ್ರವಾದ ಯಮನೂರು ಗ್ರಾಮದಲ್ಲಿ ಬೆಣ್ಣೆಹಳ್ಳದ ಪ್ರವಾಹದಿಂದ ಗ್ರಾಮಸ್ಥರು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕೈಗೊಳ್ಳಲಾಗುತ್ತಿರುವ ಪ್ರವಾಹ ನಿಯಂತ್ರಣ ಕಾಮಗಾರಿ ಹಾಗೂ ಗ್ರಾಮದ ಆರತಿ ಕಾಮಗಾರಿಯನ್ನು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಗ್ರಾಮಸ್ಥರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ, ಬೆಣ್ಣೆಹಳ್ಳದ ಪ್ರವಾಹ ನಿಯಂತ್ರಣ ಕಾಮಗಾರಿಗೆ ವಿಶೇಷ ಆದ್ಯತೆ ನೀಡಲಾಗಿದೆ. ಜನರ ಸುರಕ್ಷತೆ, ಅನುಕೂಲತೆ ಮತ್ತು ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕೈಗೊಳ್ಳುವ ಪ್ರತಿಯೊಂದು ಅಭಿವೃದ್ಧಿ ಕಾರ್ಯವೂ ದೀರ್ಘಕಾಲ ಬಾಳಿಕೆ ಬರುವಂತಿರಬೇಕು ಹಾಗೂ ಉನ್ನತ ಗುಣಮಟ್ಟದಿಂದ ಕೂಡಿರಬೇಕು ಎಂಬುದು ನಮ್ಮ ಬದ್ಧತೆ. ಅಭಿವೃದ್ಧಿ ಕಾರ್ಯಗಳಲ್ಲಿ ಗುಣಮಟ್ಟಕ್ಕೆ ಮೊದಲ ಆದ್ಯತೆ ಕಾಮಗಾರಿಗಳ ಅನುಷ್ಠಾನದಲ್ಲಿ ಯಾವುದೇ ರಾಜಿಯಿಲ್ಲ ಜನರ ಹಿತವೇ ನಮ್ಮ ಸಂಕಲ್ಪ ಎಂದರು.
ಈ ಸಂದರ್ಭದಲ್ಲಿ ತಹಶೀಲ್ದಾರ ಸುಧೀರ ಸಾವಕಾರ, ನೀರಾವರಿ ಇಲಾಖೆ ಅಧಿಕಾರಿ ರಾಘವೇಂದ್ರ ಜಾಲಗಾರ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ರವೀಂದ್ರಗೌಡ ಪಾಟೀಲ ಸೇರಿದಂತೆ ಗ್ರಾಮಸ್ಥರು ಇದ್ದರು.
Kshetra Samachara
03/11/2026 10:19 pm
LOADING...