ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಬ್ಬಿನ ಬೆಲೆ ನಿಗದಿ ವಿಚಾರ ಮತ್ತೆ ವಿಫಲ: ಕಾರ್ಖಾನೆ ಮಾಲೀಕರು ಪಟ್ಟು ಸಡಿಲಿಸದ ಹಿನ್ನೆಲೆಯಲ್ಲಿ ಮತ್ತೊಂದು ಸುತ್ತಿನ ಸಭೆ

ಬೆಳಗಾವಿ: ಕಬ್ಬು ಬೆಳೆಗಾರರ ಹೋರಾಟ ತೀವ್ರಗೊಂಡಿರುವ ಬೆನ್ನಲ್ಲೇ ಕಬ್ಬಿನ ಬೆಲೆ ನಿಗದಿ ವಿಚಾರವಾಗಿ ಕಾರ್ಖಾನೆ ಮಾಲೀಕರು ಹಾಗೂ ರೈತ ಮುಖಂಡರ ನಡುವೆ ನಡೆದ ಮತ್ತೊಂದು ಸುತ್ತಿನ ಸಭೆಯೂ ವಿಫಲವಾಗಿದೆ. ಕಾರ್ಖಾನೆ ಮಾಲೀಕರು ತಮ್ಮ ಪಟ್ಟು ಸಡಿಲಿಸದ ಹಿನ್ನೆಲೆಯಲ್ಲಿ ಬೆಲೆ ನಿಗದಿ ಕುರಿತು ಒಮ್ಮತ ಮೂಡಿಸಲು ಸಾಧ್ಯವಾಗಿಲ್ಲ.

ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಕಾರ್ಖಾನೆ ಮಾಲೀಕರೊಂದಿಗೆ ರಹಸ್ಯ ಸಭೆ ನಡೆಸಲಾಗಿದ್ದು, ಕಬ್ಬಿನ ದರ ನಿಗದಿ ಕುರಿತು ಚರ್ಚೆ ನಡೆದಿದೆ. ಆದರೆ ಈ ಸಭೆಯಲ್ಲಿಯೂ ಯಾವುದೇ ಅಂತಿಮ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ ಎನ್ನಲಾಗಿದೆ.

ಇದಾದ ಬಳಿಕ ಕಬ್ಬಿನ ಬೆಲೆ ನಿಗದಿ ವಿಚಾರವಾಗಿ ಮತ್ತೊಂದು ಸುತ್ತಿನ ಸಭೆಯನ್ನು ಬೆಳಗಾವಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಸಲಾಯಿತು.

ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ, ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ಶಿಂಧೆ, ನಗರ ಪೊಲೀಸ್ ಆಯುಕ್ತ ಪ್ರಕಾಶ ನಿಕ್ಕಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಸೇರಿದಂತೆ ಅಧಿಕಾರಿಗಳು ಭಾಗವಹಿಸಿದ್ದರು.

ಕಬ್ಬು ಬೆಳೆಗಾರರ ಬೇಡಿಕೆ ಹಾಗೂ ಕಾರ್ಖಾನೆ ಮಾಲೀಕರ ನಿಲುವಿನ ನಡುವೆ ಹೊಂದಾಣಿಕೆ ಮೂಡಿಸುವ ಪ್ರಯತ್ನ ಮುಂದುವರಿದಿದ್ದು, ಸಭೆಯ ಫಲಿತಾಂಶದ ಮೇಲೆ ರೈತರ ಮುಂದಿನ ಹೋರಾಟದ ನಿರ್ಧಾರ ಅವಲಂಬಿತವಾಗಿದೆ.

Edited By :
PublicNext

PublicNext

03/11/2026 10:19 pm

Cinque Terre

7.39 K

Cinque Terre

0

ಸಂಬಂಧಿತ ಸುದ್ದಿ