ಬೆಳಗಾವಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಟಾವಿಗೆ ಸಿದ್ಧವಾಗಿದ್ದ ಸುಮಾರು ₹4.20 ಲಕ್ಷ ಮೌಲ್ಯದ ಕಬ್ಬು ಬೆಂಕಿಗಾಹುತಿಯಾದ ಘಟನೆ ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ತಿಗಡಿ ಗ್ರಾಮದ ರೈತ ಆನಂದ ಗಂಗಪ್ಪ ನಿರಡಿ ಅವರಿಗೆ ಸೇರಿದ 2 ಎಕರೆ 15 ಗುಂಟೆ ಜಮೀನಿನಲ್ಲಿ ಬೆಳೆದಿದ್ದ ಕಬ್ಬು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಕಬ್ಬಿನ ಬೆಳೆಗೆ ವ್ಯಾಪಿಸಿದೆ ಎನ್ನಲಾಗಿದೆ.
ಕಬ್ಬಿಗೆ ಸೂಕ್ತ ಬೆಲೆ ನೀಡುವಂತೆ ಒತ್ತಾಯಿಸಿ ರೈತರು ನಡೆಸುತ್ತಿರುವ ಹೋರಾಟದ ಹಿನ್ನೆಲೆಯಲ್ಲಿ ಸಕ್ಕರೆ ಕಾರ್ಖಾನೆಗಳು ಕಬ್ಬು ನುರಿಸುವ ಕಾರ್ಯವನ್ನು ವಿಳಂಬಗೊಳಿಸಿವೆ. ಇದರಿಂದ ಕಟಾವಿಗೆ ಬಂದಿದ್ದ ಕಬ್ಬು ಜಮೀನುಗಳಲ್ಲೇ ಉಳಿದಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಇದರಿಂದ ಮತ್ತಷ್ಟು ಅನಾಹುತ ಸಂಭವಿಸುವುದನ್ನು ತಪ್ಪಿಸಿದ್ದಾರೆ. ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
03/11/2026 10:35 pm
LOADING...