ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಕಸ ವಿಂಗಡಣೆ ಕಡ್ಡಾಯ, ಇಂದಿರಾ ಕ್ಯಾಂಟೀನ್‌ನಲ್ಲಿ ಜನಸಾಮಾನ್ಯರೊಂದಿಗೆ ಉಪಹಾರ ಸವಿದ ಜಿಲ್ಲಾಧಿಕಾರಿ

ಚಿಕ್ಕಮಗಳೂರು: ನಗರದ ಸಗಣಿಪುರ ಬಡಾವಣೆಯಲ್ಲಿ ದಿಢೀರ್ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅವರು, ಘನತ್ಯಾಜ್ಯ ನಿರ್ವಹಣೆಯ ಬಗ್ಗೆ ಸಾರ್ವಜನಿಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. 2026ರ ಹೊಸ ನಿಯಮಗಳ ಅನ್ವಯ ಕಸವನ್ನು ಹಸಿ, ಒಣ, ಸ್ಯಾನಿಟರಿ ಮತ್ತು ಅಪಾಯಕಾರಿ ತ್ಯಾಜ್ಯಗಳೆಂದು ಕಡ್ಡಾಯವಾಗಿ ನಾಲ್ಕು ಭಾಗಗಳಾಗಿ ವಿಂಗಡಿಸಿಯೇ ನಗರಸಭೆಯ ವಾಹನಗಳಿಗೆ ನೀಡಬೇಕು, ಇಲ್ಲವಾದಲ್ಲಿ ಪರಿಸರ ಮಾಲಿನ್ಯದ ಜೊತೆಗೆ ಕಠಿಣ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ನಂತರ ನಗರದ ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಅಲ್ಲಿನ ಆಹಾರ ವಿತರಣೆ ವ್ಯವಸ್ಥೆಯನ್ನು ಪರಿಶೀಲಿಸಿದರು. ಕೇವಲ ಅಧಿಕಾರಿಗಳಿಂದ ಮಾಹಿತಿ ಪಡೆಯದೆ, ಸಾಮಾನ್ಯ ಜನರೊಂದಿಗೆ ಕುಳಿತು ತಾವೇ ಉಪಹಾರ ಸವಿಯುವ ಮೂಲಕ ಆಹಾರದ ರುಚಿ ಹಾಗೂ ಗುಣಮಟ್ಟವನ್ನು ಖುದ್ದಾಗಿ ಪರೀಕ್ಷಿಸಿ ಗಮನ ಸೆಳೆದರು.

Edited By : PublicNext Desk
Kshetra Samachara

Kshetra Samachara

03/11/2026 10:40 pm

Cinque Terre

620

Cinque Terre

0

ಸಂಬಂಧಿತ ಸುದ್ದಿ