ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಪಡನ್ನಕ್ಕಾಡ್ ನೆಹರೂ ಕಾಲೇಜಿನ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಲಾರಿಗೆ ಬೈಕ್ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟ ಘಟನೆ ವರದಿಯಾಗಿದೆ.
ನೀಲೇಶ್ವರ ಪಡಿಂಜಾಟಂ ಕೊಳುವಲ್ ನಿವಾಸಿಗಳಾದ ಅನುರಾಗ್ (22) ಮತ್ತು ಆನಂದ ಕೃಷ್ಣನ್ (24) ಮೃತಪಟ್ಟವರು.
ಇವರಿಬ್ಬರು ನೀಲೇಶ್ವರದಿಂದ ಕಾಞಂಗಾಡ್ ತಿರುವತ್ತ ಅರಯಿಲ್ ಭಗವತಿ ದೇವಸ್ಥಾನದಲ್ಲಿ ನಡೆಯುತ್ತಿದ್ದ ತೆಯ್ಯಂ ವೀಕ್ಷಿಸಲು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ರಾತ್ರಿ 9 ಗಂಟೆಯ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನೂ ತಕ್ಷಣ ಕಾಞಂಗಾಡ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತ ಅನುರಾಗ್ ನೀಲೇಶ್ವರದ ವಸಂತ ಹೋಟೆಲ್‌ನಲ್ಲಿ ಕ್ಯಾಷಿಯರ್ ಆಗಿದ್ದರು ಎಂದು ತಿಳಿದುಬಂದಿದೆ.
PublicNext
04/11/2026 08:50 am
LOADING...