ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ : ಪೋಕ್ಸೊ ಪ್ರಕರಣದಲ್ಲಿ ಅಪರಾಧಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ದಂಡ

ಶಿವಮೊಗ್ಗ : ಶಿವಮೊಗ್ಗದಲ್ಲಿ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ.

​16 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ 24 ವರ್ಷದ ಆರೋಪಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.

​ನ್ಯಾಯಾಧೀಶರಾದ ನಿಂಗನಗೌಡ ಭ ಪಾಟೀಲ್ ಅವರು ಈ ತೀರ್ಪು ನೀಡಿದ್ದು, ಅಪರಾಧಿಗೆ ಒಟ್ಟು 6,84,000 ರೂಪಾಯಿ ದಂಡ ವಿಧಿಸಿದ್ದಾರೆ. ಈ ದಂಡದ ಮೊತ್ತದಲ್ಲಿ 6,00,000 ರೂಪಾಯಿಯನ್ನು ಸಂತ್ರಸ್ತೆಗೆ ಪರಿಹಾರವಾಗಿ ನೀಡಲು ಆದೇಶಿಸಲಾಗಿದೆ. ಇದರೊಂದಿಗೆ ಸರ್ಕಾರದ ವತಿಯಿಂದ ಬಾಲಕಿಗೆ ಹೆಚ್ಚುವರಿಯಾಗಿ 4,00,000 ರೂಪಾಯಿ ಪರಿಹಾರ ಮಂಜೂರಾಗಿದೆ.

​ತೀರ್ಥಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಈ ಪ್ರಕರಣದ ತನಿಖೆ ಪೂರೈಸಿ ಪಿಐ ಅಶ್ವತ್‌ ಗೌಡ ದೋಷಾರೋಪಣ ಪತ್ರ ಸಲ್ಲಿಸಿದ್ದರು. ಸರ್ಕಾರಿ ಅಭಿಯೋಜಕ ಶ್ರೀಧರ್ ನ್ಯಾಯಾಲಯದಲ್ಲಿ ಸಮರ್ಥ ವಾದ ಮಂಡಿಸಿದ್ದರು.

Edited By : PublicNext Desk
PublicNext

PublicNext

04/11/2026 10:24 am

Cinque Terre

3.01 K

Cinque Terre

0

ಸಂಬಂಧಿತ ಸುದ್ದಿ