ಚಿಕ್ಕಮಗಳೂರು: ಕೆಎಸ್‌ಆರ್‌ಟಿಸಿ ಡಿಪೋದಲ್ಲಿ ಡಿಪೋ ಮ್ಯಾನೇಜರ್ ಸಿಬ್ಬಂದಿಗಳಿಗೆ ತೀವ್ರ ಕಿರುಕುಳ ನೀಡಲಾಗುತ್ತಿದೆ ಎಂದು ಸಿಪಿಐ ಮುಖಂಡರಾದ ರಾಧಾ ಸುಂದರೇಶ್ ಅವರು ಗಂಭೀರ ಆರೋಪ ಮಾಡಿದ್ದಾರೆ. ಸಿಬ್ಬಂದಿಗಳು ಅನಾರೋಗ್ಯದ ಕಾರಣದಿಂದ ದಿಢೀರ್ ಆಗಿ ಫೋನ್ ಮೂಲಕ ರಜೆ ಕೋರಿದರೂ ಅಥವಾ ಖುದ್ದಾಗಿ ರಜೆ ಪತ್ರ ನೀಡಲು ಹೋದರೂ ಅದನ್ನು ಸ್ವೀಕರಿಸದೆ 'ಗೈರು' ಎಂದು ದಾಖಲಿಸಲಾಗುತ್ತಿದೆ ಎಂದು ಅವರು ದೂರಿದ್ದಾರೆ. ಅಲ್ಲದೆ, ಕಚೇರಿಯಲ್ಲಿ ರಜೆ ಪತ್ರ ಸ್ವೀಕರಿಸಲು ಸರಿಯಾದ ವ್ಯವಸ್ಥೆಯಾಗಲಿ ಅಥವಾ ಸಂಬಂಧಪಟ್ಟ ಅಧಿಕಾರಿಗಳಾಗಲಿ ಇರುವುದಿಲ್ಲ ಎಂಬುದು ಅವರ ಪ್ರಮುಖ ಆರೋಪವಾಗಿದೆ.
ಸಿಬ್ಬಂದಿಗಳು ತಿಂಗಳಲ್ಲಿ 22 ರಿಂದ 24 ದಿನಗಳ ಕಾಲ ಕಟ್ಟುನಿಟ್ಟಾಗಿ ಕರ್ತವ್ಯ ನಿರ್ವಹಿಸಿದರೂ, ಅವರಿಗೆ ನಿಯಮಾನುಸಾರ ಸಿಗಬೇಕಾದ ಇಎಲ್ (EL) ಮತ್ತು ಸಿಎಲ್ (CL) ನಂತಹ ಸೌಲಭ್ಯಗಳನ್ನು ನೀಡದೆ ವಂಚಿಸಲಾಗುತ್ತಿದೆ. ಈ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವಂತೆ ಹಾಗೂ ರಜೆ ಪತ್ರಗಳನ್ನು ಸ್ವೀಕರಿಸಲು ಪ್ರತ್ಯೇಕ ರಿಜಿಸ್ಟರ್ ನಿರ್ವಹಿಸುವಂತೆ ಒತ್ತಾಯಿಸಿ ನೂರಕ್ಕೂ ಹೆಚ್ಚು ಅರ್ಜಿಗಳನ್ನು ವಿಭಾಗೀಯ ನಿಯಂತ್ರಣಾಧಿಕಾರಿಗೆ (DC) ಸಲ್ಲಿಸಲಾಗಿದೆ. ಈ ವ್ಯವಸ್ಥೆಯನ್ನು ಸರಿಪಡಿಸಲು ಡಿಸಿ ಅವರು ಐದು ದಿನಗಳ ಕಾಲಾವಕಾಶ ಕೇಳಿದ್ದಾರೆ ಎಂದು ರಾಧಾ ಸುಂದರೇಶ್ ತಿಳಿಸಿದ್ದಾರೆ.
ಡಿಪೋ ಮ್ಯಾನೇಜರ್ ಅವರ ವರ್ತನೆ ಅತ್ಯಂತ ಕೆಟ್ಟದಾಗಿದ್ದು, ಮುಂದಿನ ದಿನಗಳಲ್ಲಿ ಅವರ ವಿರುದ್ಧ ಉಗ್ರ ಚಳುವಳಿ ನಡೆಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
PublicNext
04/11/2026 11:06 am
LOADING...