ಚಾಮರಾಜನಗರ : ಸುತ್ತೂರು ಡಾ.ಶ್ರೀಶಿವ ರಾತ್ರಿ ರಾಜೇಂದ್ರ ಮಹಾಸ್ವಾಮೀಜಿಯವರ 111ನೇ ಜಯಂತಿ ಮಹೋತ್ಸವದ ಅಂಗವಾಗಿ ಚಾಮರಾಜನಗರದಲ್ಲಿ ರಾಜೇಂದ್ರ ಶ್ರೀಗಳ ಭಾವಚಿತ್ರ ಮೆರವಣಿ ವಿಜೃಂಭಣೆಯಿಂದ ನಡೆಯಿತು.
ಚಾಮರಾಜನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಎದುರು ರಾಜೇಂದ್ರ ಶ್ರೀಗಳ ಭಾವಚಿತ್ರ ಮೆರವಣಿಗೆಗೆ ಸುತ್ತೂರು ಶ್ರೀಶಿ ವರಾತ್ರಿ ದೇಶೀಕೇಂದ್ರ ಮಹಾ ಸ್ವಾಮೀಜಿ ಅವರು ಚಾಲನೆ ನೀಡಿದರು.
ಬಳಿಕ ಮೆರವಣಿಗೆಯು ವಿವಿಧ ಕಲಾ ತಂಡಗಳೊಡನೆ ಬಿ.ರಾಚಯ್ಯ ಜೋಡಿರಸ್ತೆ ಮೂಲಕ ಸಾಗಿ ಜೆಎಸ್‌ಎಸ್ ಕಾಲೇಜಿನಲ್ಲಿ ಅಂತ್ಯಗೊಂಡಿತು. ಮೆರವಣಿಗೆಯುದ್ದಕ್ಕೂ ಯುವಕರು ಹಾಗೂ ವಿದ್ಯಾರ್ಥಿಗಳು ಕಲಾ ತಂಡದ ಶಬ್ದಕ್ಕೆ ಹೆಜ್ಜೆ ಹಾಕಿ ಸಂಭ್ರಮಿಸಿದರು. ಕಾಲೇಜಿಗೆ ಆಗಮಿಸಿದ ಭಾವಚಿತ್ರ ಮೆರವಣಿಗೆಗೆ ವಿದ್ಯಾರ್ಥಿನಿಯರು ಕಳಸ ಹಿಡಿದು ಅದ್ದೂರಿಯಾಗಿ ಬರಮಾಡಿಕೊಂಡರು.
PublicNext
04/11/2026 11:35 am
LOADING...