ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಸರ್ಕಾರ ಎರಡು ತಿಂಗಳ ಗೃಹಲಕ್ಷ್ಮಿ ಹಣ ಪಾವತಿಸಿಲ್ಲ, ಆ ಹಣ ಎಲ್ಲೋಯ್ತು?- ನಿಖಿಲ್ ಕುಮಾರಸ್ವಾಮಿ ಪ್ರಶ್ನೆ

ಬೆಂಗಳೂರು: ಪ್ರತಿ ತಿಂಗಳು ಗೃಹಲಕ್ಷ್ಮಿಯರ ಖಾತೆಗೆ ಹಣ ಹಾಕುತ್ತೇವೆ ಎಂದು ಭರವಸೆ ನೀಡಿದ್ದ ಸರ್ಕಾರ ಎರಡು ತಿಂಗಳ ಹಣವನ್ನು ಪಾವತಿಸಿಲ್ಲವೇಕೆ? ಆ ಹಣ ಎಲ್ಲಿ ಹೋಯಿತು? ರಾಜ್ಯದ ಖಜಾನೆಯಲ್ಲಿ ಹಣವಿಲ್ಲವೇ? ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯ 2024ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಹಣ ಫಲಾನುಭವಿಗಳಿಗೆ ತಲುಪಿಲ್ಲ. ಈ ಎರಡು ತಿಂಗಳ ಹಣದ ಮೊತ್ತವೇ ಸುಮಾರು 5 ಸಾವಿರ ಕೋಟಿ ರೂಪಾಯಿ ಆಗಿದೆ ಎಂದಿದ್ದಾರೆ.

ನಾಡಿನ ಮಹಿಳೆಯರನ್ನು ಗೃಹಲಕ್ಷ್ಮಿಯರು ಎಂದು ಕರೆಯುವ ಸರ್ಕಾರ, ಗ್ಯಾರಂಟಿ ಯೋಜನೆಯಡಿ ಪ್ರತಿ ತಿಂಗಳು ಡಿಬಿಟಿ ಮೂಲಕ ಹಣ ವರ್ಗಾವಣೆ ಮಾಡುವುದಾಗಿ ಘೋಷಿಸಿತ್ತು. ಆದರೆ ಯೋಜನೆ ಜಾರಿಯಾದ ಮೊದಲ ವರ್ಷದಲ್ಲೇ ಎಂಟು ತಿಂಗಳ ಹಣ ಮಾತ್ರ ಪಾವತಿಯಾಗಿದೆ. 2024ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಹಣ ಏನಾಯಿತು ಎಂದು ಪ್ರಶ್ನಿಸಿದ್ದಾರೆ.

ವಿಚಾರ ಈಗ ನ್ಯಾಯಾಲಯದ ಮೆಟ್ಟಿಲೇರಿದೆ. ಕೆಲವು ಮಹಿಳೆಯರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಪ್ರಕರಣ ವಿಚಾರಣೆಯಲ್ಲಿದೆ. ಎರಡು ತಿಂಗಳ ಹಣ ಪಾವತಿಸಿರುವ ಕುರಿತು ಅಫಿಡವಿಟ್ ಸಲ್ಲಿಸುವಂತೆ ನ್ಯಾಯಾಲಯ ಕೇಳಿದೆ. ಆದರೆ ಸರ್ಕಾರ ಅಫಿಡವಿಟ್‌ಗೆ ಆಕ್ಷೇಪಣೆ ಸಲ್ಲಿಸಿದೆ ಎಂದಿದ್ದಾರೆ.

ಸರ್ಕಾರ ಸಲ್ಲಿಸಿರುವ ಆಕ್ಷೇಪಣೆಯಲ್ಲಿ ಆರ್ಥಿಕ ಹೊರೆಯ ಕಾರಣದಿಂದ ಎರಡು ತಿಂಗಳ ಹಣ ಪಾವತಿಸಲು ಸಾಧ್ಯವಾಗಿಲ್ಲ ಎಂದು ಹೇಳಲಾಗಿದೆ. ಹಣ ಬಿಡುಗಡೆ ಮಾಡುವಂತೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದರೂ, ಆರ್ಥಿಕ ಸಮಸ್ಯೆಯಿಂದ ಅನುದಾನ ಬಿಡುಗಡೆ ಮಾಡಿಲ್ಲ ಎಂಬ ಮಾಹಿತಿ ನೀಡಲಾಗಿದೆ ಎಂದಿದ್ದಾರೆ.

ಇದರಿಂದ ರಾಜ್ಯದ ಖಜಾನೆಯಲ್ಲಿ ಹಣಕಾಸಿನ ಸಮಸ್ಯೆ ಇರುವುದನ್ನು ಅರ್ಥಮಾಡಿಕೊಳ್ಳಬಹುದು. ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಜನರಿಗೆ ಭರವಸೆ ನೀಡಿದ ಸರ್ಕಾರ ಈಗ ಹಣ ಪಾವತಿಸಲು ಸಾಧ್ಯವಾಗದೆ ಸಬೂಬು ಹೇಳುತ್ತಿದೆ ಎಂದು ಟೀಕಿಸಿದರು.

ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲೂ ಈ ವಿಚಾರ ಚರ್ಚೆಯಾಗಿತ್ತು. ಆಗ ಸದನದಲ್ಲಿ ಸಂಬಂಧಪಟ್ಟ ಸಚಿವರು ಹಣ ಪಾವತಿಸಲಾಗಿದೆ ಎಂದು ಹೇಳಿದ್ದರು. ಆದರೆ ನಂತರ ಹಣ ನೀಡಿಲ್ಲ ಎಂಬುದನ್ನು ಒಪ್ಪಿಕೊಂಡಿದ್ದಾರೆ. ಮೊದಲು ಹಣ ಕೊಟ್ಟಿದ್ದೇವೆ ಎಂದು ಹೇಳಿ, ಬಳಿಕ ಜಾರಿಕೊಳ್ಳುವ ಕೆಲಸ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Edited By :
PublicNext

PublicNext

04/11/2026 12:50 pm

Cinque Terre

4.9 K

Cinque Terre

0

ಸಂಬಂಧಿತ ಸುದ್ದಿ