ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ ಜಿಲ್ಲೆಯಲ್ಲಿ ಭೂ ಮಂಜೂರಾತಿ, ಸರ್ಕಾರಿ ಜಾಗದಲ್ಲಿ ಕಟ್ಟಿದ ಮನೆಗಳ ಸಕ್ರಮಾತಿಗೆ ಇರುವ ಅಡೆತಡೆ ನಿವಾರಣೆಗೆ ಸಚಿವ ರಿಜ್ವಾನ್ ಅರ್ಷದ್ ಸೂಚನೆ

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಅರಣ್ಯ ಹಾಗೂ ಕಂದಾಯ ಇಲಾಖೆಗಳಿಗೆ ಸಂಬಂಧಿಸಿದಂತೆ ಜನರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ರಿಜ್ವಾನ್ ಅರ್ಷದ್ ಅವರು ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಅವರೊಂದಿಗೆ ಉಡುಪಿ ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳ ಜೊತೆ ಸುದೀರ್ಘ ಸಭೆ ನಡೆಸಿದರು.

ಸಭೆಯಲ್ಲಿ ಪ್ರಮುಖವಾಗಿ ಸರ್ಕಾರಿ ಭೂಮಿಯಲ್ಲಿ ಕಟ್ಟಲಾಗಿರುವ ಮನೆಗಳ ಸಕ್ರಮೀಕರಣ, ಬಗರ್ ಹುಕುಂ ಜಮೀನುಗಳ ವಿತರಣೆಯಲ್ಲಾಗುತ್ತಿರುವ ವಿಳಂಬ, ಗೋಡಂಬಿ ಪ್ಲಾಂಟೇಶನ್‌ಗಳ ಲೀಸ್ ಅವಧಿ ವಿಸ್ತರಣೆ ಹಾಗೂ ಡೀಮ್ಡ್ ಫಾರೆಸ್ಟ್ ಸರ್ವೆಯಲ್ಲಿನ ಅಡೆತಡೆಗಳ ಕುರಿತು ಚರ್ಚಿಸಲಾಯಿತು.

ಶಾಸಕ ಸುನೀಲ್ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ 94ಸಿ ಅಡಿಯಲ್ಲಿ ಸರ್ಕಾರಿ ಜಾಗದಲ್ಲಿ ಕಟ್ಟಲಾಗಿರುವ ಮನೆಗಳ ಸಕ್ರಮಕ್ಕೆ ಸಲ್ಲಿಸಲಾದ ಅರ್ಜಿಗಳನ್ನು ಅಧಿಕಾರಿಗಳು ಹಲವು ಕಾರಣಗಳನ್ನು ನೀಡಿ ತಿರಸ್ಕರಿಸುತ್ತಿದ್ದಾರೆ. ಸರ್ಕಾರಿ ಜಾಗಗಳಲ್ಲಿ ಮನೆ ನಿರ್ಮಿಸಿಕೊಂಡವರೆಲ್ಲರೂ ಬಡವರು. ಒಮ್ಮೆ ಅರ್ಜಿ ತಿರಸ್ಕೃತಗೊಂಡರೆ ಜನರು ಮತ್ತೆ ಅರ್ಜಿ ಸಲ್ಲಿಸುವಂತಿಲ್ಲ ಎಂದು ತಿಳಿಸಿದರು.

ಅದೇ ರೀತಿ ಶಾಸಕರ ನೇತೃತ್ವದ ಸಮಿತಿಗಳು ವಿಲೇವಾರಿ ಮಾಡಿದ ಬಗರ್ ಹುಕುಂ ಜಮೀನುಗಳ ಸರ್ವೇ ಕಾರ್ಯದಲ್ಲಿ ವಿಳಂಬವಾಗುತ್ತಿದೆ ಎಂದರು.

ಇದಕ್ಕೆ ಉತ್ತರಿಸಿದ ಕಂದಾಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ, ಫಾರಂ 94ಸಿ ಅಡಿಯಲ್ಲಿ ಮನೆಗಳ ಸಕ್ರಮಕ್ಕೆ ಎದುರಾಗುತ್ತಿರುವ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಬಗೆಹರಿಸಲಾಗುವುದು ಎಂದರು.

ಸಚಿವ ರಿಜ್ವಾನ್ ಅರ್ಷದ್ ಅವರ ಸೂಚನೆ ಮೇರೆಗೆ ಕಟಾರಿಯಾ ಅವರು ಸದ್ಯದಲ್ಲೇ ಕಂದಾಯ ಇಲಾಖೆಯ ತಾಂತ್ರಿಕ ಸಮಿತಿಯನ್ನು ಉಡುಪಿ ಜಿಲ್ಲೆಗೆ ಕಳುಹಿಸಿ, ಭೂಮಿ ವಿತರಣೆ ಹಾಗೂ ಸರ್ವೇಗೆ ಸಂಬಂಧಿಸಿದ ಎಲ್ಲ ಸಮಸ್ಯೆಗಳನ್ನು ಅಧ್ಯಯನ ಮಾಡಿ ಪರಿಹಾರ ಕಂಡುಕೊಳ್ಳಲಾಗುವುದು ಎಂದರು.

ಬಗರ್ ಹುಕುಂ ಭೂಮಿ ಮಂಜೂರಾತಿಗೆ ಸಂಬಂಧಿಸಿದಂತೆ ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು, ನೈಜ ಅರ್ಜಿಗಳನ್ನು ಪರಿಗಣಿಸಲಾಗುವುದು ಎಂದು ಕಟಾರಿಯಾ ತಿಳಿಸಿದರು.

Edited By :
PublicNext

PublicNext

04/11/2026 12:54 pm

Cinque Terre

3.68 K

Cinque Terre

0

ಸಂಬಂಧಿತ ಸುದ್ದಿ