ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ಮೂಕುತಿ ಅಮ್ಮ'ನಾಗಿ ಲೇಡಿ ಸೂಪರ್‌ಸ್ಟಾರ್ ಎಂಟ್ರಿ: ಹೊಸ ಅವತಾರಕ್ಕೆ ಫ್ಯಾನ್ಸ್ ಫಿದಾ

ಚೆನ್ನೈ: ದಕ್ಷಿಣ ಭಾರತ ಚಿತ್ರರಂಗದ 'ಲೇಡಿ ಸೂಪರ್‌ಸ್ಟಾರ್' ಖ್ಯಾತಿಯ ನಟಿ ನಯನತಾರಾ ಮತ್ತೊಮ್ಮೆ ದೇವತೆಯ ಅವತಾರದಲ್ಲಿ ಬೆಳ್ಳಿಪರದೆ ಮೇಲೆ ಕಮಾಲ್ ಮಾಡಲು ಸಜ್ಜಾಗಿದ್ದಾರೆ. ತಮಿಳು, ತೆಲುಗು, ಮಲಯಾಳಂ ಸೇರಿದಂತೆ ಭಾರತೀಯ ಚಿತ್ರರಂಗದ ಬಹುಬೇಡಿಕೆಯ ನಟಿಯಾಗಿರುವ ಅವರು, ತಮ್ಮ ಮುಂಬರುವ ಬಹುನಿರೀಕ್ಷಿತ 'ಮೂಕುತಿ ಅಮ್ಮನ್ 2' (Mookuthi Amman 2) ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ.

ಈ ಚಿತ್ರವು ಈ ಬಾರಿಯ ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಬಿಡುಗಡೆಯಾಗುತ್ತಿದ್ದು, ಚಿತ್ರತಂಡದಲ್ಲಿ ಹಾಗೂ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿಸಿದೆ. ಚಿತ್ರದ ಬಿಡುಗಡೆಗೂ ಮುನ್ನ ನಟಿ ನಯನತಾರಾ ತಮ್ಮ ಮನೆಯಲ್ಲಿ ದೇವರ ಪೂಜೆ ಸಲ್ಲಿಸಿ ಚಿತ್ರದ ಯಶಸ್ಸಿಗಾಗಿ ಪ್ರಾರ್ಥಿಸಿದ್ದಾರೆ.

ಕಪ್ಪು ಬಣ್ಣದ ಸಾಂಪ್ರದಾಯಿಕ ಸೀರೆಯನ್ನುಟ್ಟು ಭಕ್ತಿಭಾವದಿಂದ ಪೂಜೆ ಸಲ್ಲಿಸಿದ ಸುಂದರ ಕ್ಷಣಗಳ ಫೋಟೋಗಳನ್ನು ನಯನತಾರಾ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅವರ ಈ ಸಾಂಪ್ರದಾಯಿಕ ಲುಕ್ ಮತ್ತು ಭಕ್ತಿಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಲೈಕ್ಸ್ ಹಾಗೂ ಶುಭಾಶಯಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ. ಹಿಂದಿನ ಭಾಗದಂತೆ 'ಮೂಕುತಿ ಅಮ್ಮನ್ 2' ಕೂಡ ಪ್ರೇಕ್ಷಕರ ಮನಗೆಲ್ಲಲಿದೆಯೇ ಎಂದು ಕಾದುನೋಡಬೇಕಿದೆ.

Edited By : Nirmala Aralikatti
PublicNext

PublicNext

04/11/2026 12:58 pm

Cinque Terre

16.4 K

Cinque Terre

0