ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶ್ರೀರಂಗಪಟ್ಟಣ: ಹಾಡುಹಗಲೇ ವಾಹನ ಕದ್ದ ಕಳ್ಳರು

ಶ್ರೀರಂಗಪಟ್ಟಣ: ಹಾಡುಹಗಲೇ ಮನೆಯ ಮುಂದೆ ನಿಲ್ಲಿಸಿದ್ದ ಬುಲೆರೋ ವಾಹನವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಶ್ರೀರಂಗಪಟ್ಟಣ ಟೌನ್ ವ್ಯಾಪ್ತಿಯ ಗಂಜಾಮ್ ಗ್ರಾಮದಲ್ಲಿ ನಡೆದಿದೆ.

ಗಂಜಾಮ್ ಗ್ರಾಮದ ವೆಂಕಟೇಶ್ ಎಂಬುವವರು ತರಕಾರಿ ವ್ಯಾಪಾರ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. ಅವರು ತಮ್ಮ ಬುಲೆರೋ ವಾಹನವನ್ನು ಮನೆಯ ಮುಂದೆ ನಿಲ್ಲಿಸಿದ್ದ ಸಂದರ್ಭದಲ್ಲಿ ಹಗಲು ವೇಳೆಯಲ್ಲೇ ದುಷ್ಕರ್ಮಿಗಳು ಕದ್ದೊಯ್ದಿದ್ದಾರೆ.

ಇದರಿಂದ ವ್ಯಾಪಾರ ಮಾಡಿಕೊಂಡು ಜೀವನ ನಡೆಸುತ್ತಿದ್ದ ವೆಂಕಟೇಶ್ ಕಂಗಾಲಾಗಿದ್ದಾರೆ. ಮನೆಯ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳಲ್ಲಿ ವಾಹನ ಕಳ್ಳತನ ಮಾಡುತ್ತಿರುವ ದೃಶ್ಯಗಳು ದಾಖಲಾಗಿವೆ. ಈ ಬಗ್ಗೆ ವೆಂಕಟೇಶ್ ಅವರು ಶ್ರೀರಂಗಪಟ್ಟಣ ಪೊಲೀಸರಿಗೆ ದೂರು ನೀಡಿದ್ದು, ಕಳುವಾದ ತಮ್ಮ ವಾಹನವನ್ನು ಶೀಘ್ರವೇ ಪತ್ತೆಹಚ್ಚಿಕೊಡುವಂತೆ ಮನವಿ ಮಾಡಿದ್ದಾರೆ.

Edited By :
PublicNext

PublicNext

04/11/2026 01:21 pm

Cinque Terre

4.17 K

Cinque Terre

0

ಸಂಬಂಧಿತ ಸುದ್ದಿ