ನವಲಗುಂದ : ರೈತರ ಅನುಕೂಲತೆ, ತೋಟಗಾರಿಕೆ ಕ್ಷೇತ್ರದ ಅಭಿವೃದ್ಧಿ ಹಾಗೂ ಇಲಾಖೆಯ ಕಾರ್ಯಕ್ಷಮತೆಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವುದು ನಮ್ಮ ಆದ್ಯತೆಯಾಗಿದೆ. ಅಭಿವೃದ್ಧಿಯ ಪಯಣ ನಿರಂತರವಾಗಿರಲಿ, ರೈತರ ಬದುಕು ಹಸನಾಗಲಿ ಎಂಬುದು ನಮ್ಮ ಆಶಯ ಎಂದು ಶಾಸಕ ಎನ್.ಎಚ್. ಕೋನರಡ್ಡಿ ಹೇಳಿದರು.
ಪಟ್ಟಣದ ತೋಟಗಾರಿಕೆ ಇಲಾಖೆಯ ನೂತನ ಕಚೇರಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ, ಅಧಿಕೃತವಾಗಿ ಚಾಲನೆ ನೀಡಿ ಅವರು ಮಾತನಾಡಿದರು. ಬಳಿಕ ಇಲಾಖೆಯ ವತಿಯಿಂದ ಬೆಳೆಸಲಾಗಿರುವ ವಿವಿಧ ಬಗೆಯ ಹಣ್ಣಿನ ಗಿಡಗಳನ್ನು ವೀಕ್ಷಿಸಿ, ಅವುಗಳ ಬೆಳವಣಿಗೆ ಹಾಗೂ ನಿರ್ವಹಣೆಯ ಕುರಿತು ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಯೋಗೇಶ ಕಿಲಾರಿ, ಕೆಆರ್‌ಐಡಿಎಲ್ ಅಧಿಕಾರಿ ಅನ್ನಪೂರ್ಣ, ಸಹಾಯಕ ತೋಟಗಾರಿಕೆ ಅಧಿಕಾರಿಗಳಾದ ಬಸವರಾಜ ಕಿತ್ತೂರ, ಲಕ್ಷ್ಮೀ ಪೂಜಾರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
04/11/2026 01:27 pm
LOADING...