ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಾಮರಾಜನಗರದಲ್ಲಿ ಅದ್ದೂರಿ ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮಿಗಳ 111ನೇ ಜಯಂತ್ಯುತ್ಸವ: ಸಂಭ್ರಮಿಸಿದ ಸಾವಿರಾರು ವಿದ್ಯಾರ್ಥಿಗಳು

ಚಾಮರಾಜನಗರ : ನಗರದ ಜೆಎಸ್‌ಎಸ್ ಕಾಲೇಜು ಆವರಣದಲ್ಲಿ ಸುತ್ತೂರು ಮಠದ ಶ್ರೀ ದೇಶಿಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಪರಮಪೂಜ್ಯ ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ 111ನೇ ಜಯಂತಿ ಮಹೋತ್ಸವವನ್ನು ಅತ್ಯಂತ ಶ್ರದ್ಧಾ-ಭಕ್ತಿ ಹಾಗೂ ಅದ್ದೂರಿಯಾಗಿ ಆಚರಿಸಲಾಯಿತು.

ವಿವಿಧ ಸಾಂಸ್ಕೃತಿಕ ಕಲಾತಂಡಗಳ ಭವ್ಯ ಪ್ರದರ್ಶನವು ಮೆರವಣಿಗೆ ಮತ್ತು ಕಾರ್ಯಕ್ರಮಕ್ಕೆ ವಿಶೇಷ ಮೆರಗು ನೀಡಿತು. ಕಾರ್ಯಕ್ರಮದಲ್ಲಿ ಸ್ಯಾಂಡಲ್‌ವುಡ್ ನಟರಾದ ‘ಡಾಲಿ’ ಧನಂಜಯ್, ನಾಗಭೂಷಣ್, ಕೊಳ್ಳೇಗಾಲ ಶಾಸಕ ಎ.ಆರ್. ಕೃಷ್ಣಮೂರ್ತಿ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಪ್ರಮುಖ ಅತಿಥಿಗಳಾಗಿ ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಶ್ರೀಮತಿ ಗೌರಮ್ಮ ನಂಜನಗೂಡು ಅವರನ್ನು ಜಯಂತಿಯ ಅಂಗವಾಗಿ ಗೌರವಿಸಿ ಸನ್ಮಾನಿಸಲಾಯಿತು. ಕಾಲೇಜಿನ ಸಾವಿರಾರು ವಿದ್ಯಾರ್ಥಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದು, ಈ ಐತಿಹಾಸಿಕ ಜಯಂತ್ಯುತ್ಸವದ ಸಂಭ್ರಮಕ್ಕೆ ಸಾಕ್ಷಿಯಾದರು.

Edited By :
PublicNext

PublicNext

04/11/2026 02:12 pm

Cinque Terre

3.9 K

Cinque Terre

0

ಸಂಬಂಧಿತ ಸುದ್ದಿ