ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಕರಾವಳಿ ಪ್ರಯಾಣಿಕರಿಗೆ ದೀಪಾವಳಿ ಗಿಫ್ಟ್: ಯಶವಂತಪುರ–ಮಡಗಾಂವ್–ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ ಘೋಷಣೆ

ಮಂಗಳೂರು : ದೀಪಾವಳಿ ಹಬ್ಬದ ಪ್ರಯುಕ್ತ ಬೆಂಗಳೂರು–ಕರಾವಳಿ–ಗೋವಾ ಮಾರ್ಗದಲ್ಲಿ ಉಂಟಾಗುವ ಪ್ರಯಾಣಿಕರ ದಟ್ಟಣೆಯನ್ನು ತಪ್ಪಿಸಲು ನೈಋತ್ಯ ರೈಲ್ವೆ ಮಹತ್ವದ ಕ್ರಮ ಕೈಗೊಂಡಿದೆ. ಯಶವಂತಪುರ–ಮಡಗಾಂವ್ ಹಾಗೂ ಮಡಗಾಂವ್–ಬೆಂಗಳೂರು ಕಂಟೋನ್ಮೆಂಟ್ ನಡುವೆ ತಲಾ ಒಂದು ಟ್ರಿಪ್ ವಿಶೇಷ ರೈಲು ಸೇವೆಯನ್ನು ಘೋಷಿಸಿದೆ.

ಪುತ್ತೂರು, ಬಂಟ್ವಾಳ, ಮಂಗಳೂರು ಜಂಕ್ಷನ್, ಸುರತ್ಕಲ್, ಉಡುಪಿ, ಕುಂದಾಪುರ ಹಾಗೂ ಕಾರವಾರ ಮಾರ್ಗವಾಗಿ ಈ ವಿಶೇಷ ರೈಲು ಸಂಚರಿಸಲಿದೆ.

ರೈಲು ಸಂಚಾರದ ದಿನಾಂಕ ಹಾಗೂ ಸಮಯ:

- ರೈಲು ಸಂಖ್ಯೆ 06591 (ಯಶವಂತಪುರ–ಮಡಗಾಂವ್ ವಿಶೇಷ ಎಕ್ಸ್‌ಪ್ರೆಸ್): ನವೆಂಬರ್ 6ರ ಶುಕ್ರವಾರ ರಾತ್ರಿ 11:55ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಶನಿವಾರ (ನ. 7) ಸಂಜೆ 6:10ಕ್ಕೆ ಮಡಗಾಂವ್ ತಲುಪಲಿದೆ.

- ರೈಲು ಸಂಖ್ಯೆ 06592 (ಮಡಗಾಂವ್–ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್‌ಪ್ರೆಸ್): ನವೆಂಬರ್ 8ರ ಭಾನುವಾರ ಬೆಳಿಗ್ಗೆ 11 ಗಂಟೆಗೆ ಮಡಗಾಂವ್‌ನಿಂದ ಹೊರಟು, ಸೋಮವಾರ (ನ. 9) ಮುಂಜಾನೆ 5:20ಕ್ಕೆ ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣ ತಲುಪಲಿದೆ.

ಸೂಚನೆ: ಹಿಂದಿರುಗುವಾಗ ಈ ರೈಲು ಯಶವಂತಪುರಕ್ಕೆ ತೆರಳುವುದಿಲ್ಲ. ಬದಲಾಗಿ ಎಸ್‌ಎಂವಿಟಿ ಬೆಂಗಳೂರು ನಿಲ್ದಾಣದಲ್ಲಿ ನಿಲುಗಡೆ ಹೊಂದಲಿದೆ.

ಪ್ರಮುಖ ನಿಲುಗಡೆಗಳು:

ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು, ಬಂಟ್ವಾಳ, ಮಂಗಳೂರು ಜಂಕ್ಷನ್, ಸುರತ್ಕಲ್, ಮೂಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು, ಭಟ್ಕಳ, ಮುರ್ಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್, ಅಂಕೋಲಾ, ಕಾರವಾರ ಮತ್ತು ಕಣಕೋಣ.

19 ಬೋಗಿಗಳ ಸಂಯೋಜನೆ:

ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಎಸಿ, ಸ್ಲೀಪರ್ ಹಾಗೂ ಸಾಮಾನ್ಯ ದರ್ಜೆಯ ಬೋಗಿಗಳು ಸೇರಿದಂತೆ ಒಟ್ಟು 19 ಬೋಗಿಗಳು ಈ ವಿಶೇಷ ರೈಲಿನಲ್ಲಿ ಇರಲಿವೆ. ದಿವ್ಯಾಂಗಚೇತನರಿಗಾಗಿ ಪ್ರತ್ಯೇಕ ಬೋಗಿಯನ್ನೂ ಅಳವಡಿಸಲಾಗಿದೆ.

ಹಬ್ಬಕ್ಕೆ ಊರಿಗೆ ತೆರಳುವ ಹಾಗೂ ರಜೆ ಮುಗಿಸಿ ಬೆಂಗಳೂರಿಗೆ ಮರಳುವ ಕರಾವಳಿ ಭಾಗದ ಪ್ರಯಾಣಿಕರಿಗೆ ಈ ವಿಶೇಷ ರೈಲು ಸೇವೆ ಅನುಕೂಲವಾಗಲಿದೆ.

Edited By :
PublicNext

PublicNext

04/11/2026 02:29 pm

Cinque Terre

3.95 K

Cinque Terre

0

ಸಂಬಂಧಿತ ಸುದ್ದಿ