ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಪಘಾತದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ ಬಸವರಾಜ ಬೊಮ್ಮಾಯಿ

ಗದಗ : ಲಕ್ಷ್ಮೇಶ್ವರ ನಗರದ ಹೊರವಲಯದ ಶಿಗ್ಲಿ ರಸ್ತೆಯಲ್ಲಿ ಮೊನ್ನೆ ಬಸ್ ಮತ್ತು ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ–ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಭರತ ಬೊಮ್ಮಾಯಿ, ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ಲಕ್ಷ್ಮೇಶ್ವರ ತಾಲೂಕು ಘಟಕದ ಅಧ್ಯಕ್ಷರು ಹಾಗೂ ಸಮಗ್ರ ರೈತ ಸಂಘಟನೆ ಒಕ್ಕೂಟದ ಅಧ್ಯಕ್ಷ ಮಂಜುನಾಥ ಮಾಗಡಿ, ಮುಖಂಡ ಹೊನ್ನಪ್ಪ ವಡ್ಡರ ಉಪಸ್ಥಿತರಿದ್ದರು.

ದೈನಂದಿನ ಕೂಲಿ ಹಾಗೂ ಕೃಷಿ ಕೆಲಸಗಳಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಇಂತಹ ದುರ್ಘಟನೆ ಸಂಭವಿಸಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರತಿಯೊಬ್ಬ ಗಾಯಾಳುವಿನ ಬಳಿಗೆ ತೆರಳಿ ಆರೋಗ್ಯ ವಿಚಾರಿಸಿದ ಸಂಸದರು, ವೈದ್ಯಾಧಿಕಾರಿಗಳೊಂದಿಗೆ ಚರ್ಚಿಸಿ ಚಿಕಿತ್ಸೆಯ ಪ್ರಗತಿ ಕುರಿತು ಮಾಹಿತಿ ಪಡೆದುಕೊಂಡರು.

ಗಾಯಾಳುಗಳ ಕುಟುಂಬದವರಿಗೆ ಧೈರ್ಯ ತುಂಬಿದ ಅವರು, ಈ ಸಂಕಷ್ಟದ ಸಮಯದಲ್ಲಿ ಸರ್ಕಾರದ ವತಿಯಿಂದ ಅಗತ್ಯವಿರುವ ಎಲ್ಲ ರೀತಿಯ ನೆರವು ಒದಗಿಸಲಾಗುವುದು. ಗಾಯಾಳುಗಳಿಗೆ ಗುಣಮಟ್ಟದ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಸಂಬಂಧಪಟ್ಟ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.

ಅಪಘಾತದಲ್ಲಿ ಗಾಯಗೊಂಡ ಎಲ್ಲರೂ ಶೀಘ್ರವಾಗಿ ಸಂಪೂರ್ಣ ಗುಣಮುಖರಾಗಿ ತಮ್ಮ ಕುಟುಂಬ ಹಾಗೂ ದೈನಂದಿನ ಜೀವನಕ್ಕೆ ಮರಳಲಿ ಎಂದು ಹಾರೈಸಿದರು.

Edited By : PublicNext Desk
Kshetra Samachara

Kshetra Samachara

04/11/2026 02:55 pm

Cinque Terre

600

Cinque Terre

0

ಸಂಬಂಧಿತ ಸುದ್ದಿ