ಹುಬ್ಬಳ್ಳಿ: ಅವಳಿ ನಗರದ ಜನರ ಸಮಸ್ಯೆಗಳಿಗೆ ನೇರವಾಗಿ ಸ್ಪಂದಿಸುವ ಉದ್ದೇಶದಿಂದ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ವಿನೂತನವಾಗಿ ‘ಮೇಯರ್ ಜೊತೆ ಮಾತುಕತೆ’ ಕಾರ್ಯಕ್ರಮವು ನಡೆಯಿತು.
ಈ ಕಾರ್ಯಕ್ರಮದಲ್ಲಿ ಮಹಾಪೌರರಾದ ದುರ್ಗಮ್ಮ ಬಿಜವಾಡ ಹಾಗೂ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ್ ಘಾಳಿ ಅವರು ಸಾರ್ವಜನಿಕರ ದೂರವಾಣಿ ಕರೆಗಳನ್ನು ಸ್ವೀಕರಿಸಿ, ಜನರ ಸಮಸ್ಯೆಗಳನ್ನು ಆಲಿಸಿದರು.
ಕುಡಿಯುವ ನೀರು, ಕಸ ವಿಲೇವಾರಿ, ರಸ್ತೆ ದುರಸ್ತಿ, ಬೀದಿದೀಪ, ಒಳಚರಂಡಿ ಸೇರಿದಂತೆ ತಮ್ಮ ತಮ್ಮ ವಾರ್ಡ್‌ಗಳಲ್ಲಿನ ವಿವಿಧ ಸಮಸ್ಯೆಗಳ ಕುರಿತು ಸಾರ್ವಜನಿಕರು ಕರೆ ಮಾಡಿ ಗಮನ ಸೆಳೆದರು. ಇದರ ಜೊತೆಗೆ ವೈಯಕ್ತಿಕ ಸಮಸ್ಯೆಗಳಿಗೂ ಪರಿಹಾರ ಕಲ್ಪಿಸುವಂತೆ ಮನವಿ ಮಾಡಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
04/11/2026 03:40 pm
LOADING...