ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಳವಳ್ಳಿ: ಕಬ್ಬಿನ ಬೆಲೆ ಏರಿಕೆಗೆ ಆಗ್ರಹಿಸಿ ರೈತರಿಂದ ಹೆದ್ದಾರಿ ತಡೆದು ಪ್ರತಿಭಟನೆ

ಮಳವಳ್ಳಿ: ಕಬ್ಬಿಗೆ ಟನ್ ಗೆ 5500 ರೂ. ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತಸಂಘ ಹಾಗೂ ಶರಣರ ಸಂಘಟನೆ ಕಾರ್ಯಕರ್ತರು ಮಳವಳ್ಳಿ ಪಟ್ಟಣದ ಅನಂತರಾಂ ವೃತ್ತದಲ್ಲಿ ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿದರು. ರೈತ ಸಂಘದ ಅಧ್ಯಕ್ಷ ಬಸವರಾಜು ನೇತೃತ್ವದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ರೈತ ಸಂಘ ಜಿಲ್ಲಾ ಉ‌ಪಾಧ್ಯಕ್ಷ ರಾಮಲಿಂಗೇಗೌಡ ಮಾತನಾಡಿ, ರೈತರ ಬಗ್ಗೆ ಸರ್ಕಾರಗಳು ತಾತ್ಸಾರವಾಗಿ ಕಾಣುತ್ತಿದೆ. ರೈತರು ಕಬ್ಬು ಬೆಳೆಯಲು ಖರ್ಚಿನ ಪ್ರಮಾಣ ಹೆಚ್ಚಾಗಿದ್ದು, ಒಂದು ಟನ್ ಕಬ್ಬಿಗೆ ಕೇಂದ್ರ ಸರ್ಕಾರ 4500 ರೂ. ಎಫ್ ಆರ್ ಸಿ ನೀಡಬೇಕು. ಜೊತೆಗೆ ರಾಜ್ಯ ಸರ್ಕಾರ ಪ್ರೋತ್ಸಾಹ ಧನ 1000 ರೂ. ನೀಡಬೇಕೆಂದು ಒತ್ತಾಯಿಸಿದರು.

ಇದೇ ವೇಳೆ ರೈತ ಸಂಘದ ಅಧ್ಯಕ್ಷ ಬಸವರಾಜು ಮಾತನಾಡಿ, ಕೂಡಲೇ ಒಂದು ಟನ್ ಕಬ್ಬಿಗೆ 5500 ರೂ. ನೀಡಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ರಾಜ್ಯ ರೈತ ಸಂಘದ ಅಧ್ಯಕ್ಷ ಬಸವರಾಜು, ಜಿಲ್ಲಾ ಉಪಾಧ್ಯಕ್ಷ ರಾಮಲಿಂಗೇಗೌಡ,ಮಹೇಶ, ಶಿವನಂಜು, ಸೋ ಶಿ ಪ್ರಕಾಶ, ಬಸವರಾಜು , ಶರಣರ ಸಂಘಟನೆ ವೇದಿಕೆ ಮಹದೇವಸ್ವಾಮಿ ಸೇರಿದಂತೆ ಹಲವರು ಇದ್ದರು.

Edited By :
PublicNext

PublicNext

04/11/2026 03:42 pm

Cinque Terre

4.87 K

Cinque Terre

0

ಸಂಬಂಧಿತ ಸುದ್ದಿ