ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೈಕ್‌ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ : ಬೈಕ್ ಸವಾರ ಸಾವು

ಚಾಮರಾಜನಗರ : ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಕೊತ್ತನೂರು ಬಳಿ ನಡೆದಿದೆ. 

ಕೊಳ್ಳೇಗಾಲ ತಾಲೂಕಿನ ಕೆ.ಎಸ್.ದೊಡ್ಡಿ ಗ್ರಾಮದ ನಿವಾಸಿ ರಾಮಸ್ವಾಮಿ(45) ಮೃತ ದುರ್ದೈವಿ. ಈತ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ತೆಳ್ಳನೂರು ಗ್ರಾಮದಿಂದ ಕೊಳ್ಳೇಗಾಲ ಕಡೆಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ವೇಳೆ ತೀವ್ರ ರಕ್ತಸ್ರಾವ ರಾಮಸ್ವಾಮಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಚಾಲಕನ ಅಜಾಗರೂಕ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಸಾರ್ವಜನಿಕರು ದೂರಿದ್ದಾರೆ. 

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ಚೇತನ್ ಹಾಗೂ ಸಿಬ್ಬಂದಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದರು. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : PublicNext Desk
Kshetra Samachara

Kshetra Samachara

04/11/2026 03:52 pm

Cinque Terre

240

Cinque Terre

0

ಸಂಬಂಧಿತ ಸುದ್ದಿ