ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಮಾದನಭಾವಿ ಗೋಶಾಲೆ ಅವ್ಯವಸ್ಥೆ ವಿರುದ್ಧ ಹೋರಾಟಕ್ಕಿಳಿದ ಶ್ರೀರಾಮ ಸೇನೆ

ಧಾರವಾಡ: ಧಾರವಾಡ ತಾಲೂಕಿನ ಮಾದನಭಾವಿ ಗ್ರಾಮದಲ್ಲಿರುವ ಸರ್ಕಾರಿ ಗೋಶಾಲೆ ಸರಿಯಾಗಿ ನಿರ್ವಹಣೆಯಾಗದೇ ಅಲ್ಲಿರುವ ಗೋವುಗಳು ಸಾವನ್ನಪ್ಪುತ್ತಿರುವುದನ್ನು ಖಂಡಿಸಿ ಶ್ರೀರಾಮ ಸೇನೆ ಕಾರ್ಯಕರ್ತರು ಪ್ರಮೋದ್ ಮುತಾಲಿಕ್ ಅವರ ನೇತೃತ್ವದಲ್ಲಿ ಧಾರವಾಡದಲ್ಲಿ ಪ್ರತಿಭಟನೆ ನಡೆಸಿದರು.

ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಕಾರ್ಯಕರ್ತರು, ರಾಜ್ಯ ಸರ್ಕಾರ, ಪಶು ಸಂಗೋಪನಾ ಇಲಾಖೆ ಹಾಗೂ ಪಶುವೈದ್ಯಕೀಯ ಇಲಾಖೆ ವಿರುದ್ಧ ಧಿಕ್ಕಾರ ಕೂಗಿದರು.

ಈ ಸರ್ಕಾರಿ ಗೋಶಾಲೆ ಕಟುಕರ ಶಾಲೆಯಾಗಿದೆ. ಅಲ್ಲಿರುವ ಗೋವುಗಳನ್ನು ಸರಿಯಾಗಿ ಜೋಪಾನ ಮಾಡಲಾಗುತ್ತಿಲ್ಲ. ಅವುಗಳಿಗೆ ತಿನ್ನಲು ಮೇವಿಲ್ಲ. ಗಾಯಗೊಂಡ ಜಾನುವಾರುಗಳಿಗೆ ಸರಿಯಾಗಿ ಚಿಕಿತ್ಸೆ ಸಹ ಸಿಗುತ್ತಿಲ್ಲ. ರಾಜ್ಯ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಈ ಗೋಶಾಲೆಯಲ್ಲಿ ಸರಿಯಾಗಿ ನಿರ್ವಹಣೆಯಾಗದೇ ಗೋವುಗಳು ಎಲ್ಲಿ ಬೇಕೆಂದರಲ್ಲಿ ಬಿದ್ದು ಸಾವನ್ನಪ್ಪುತ್ತಿವೆ. ಇವುಗಳ ಶಾಪ ಕಾಂಗ್ರೆಸ್ ಸರ್ಕಾರಕ್ಕೆ ತಟ್ಟದೇ ಇರದು.

ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರ ಕೂಡಲೇ ಈ ಗೋಶಾಲೆಗೆ ಬೇಕಾಗಿರುವ ಎಲ್ಲಾ ಸವಲತ್ತುಗಳನ್ನು ನೀಡಬೇಕು. ಜಾನುವಾರುಗಳಿಗೆ ಸರಿಯಾಗಿ ಚಿಕಿತ್ಸೆ ಕೊಡಬೇಕು. ಅವುಗಳಿಗೆ ಕುಡಿಯುವ ನೀರು ಹಾಗೂ ಮೇವಿನ ವ್ಯವಸ್ಥೆ ಮಾಡಬೇಕು. ಇಲ್ಲದೇ ಹೋದಲ್ಲಿ ಶ್ರೀರಾಮ ಸೇನೆ ದೊಡ್ಡಮಟ್ಟದ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಶ್ರೀರಾಮ ಸೇನೆ ಕಾರ್ಯಕರ್ತರು ಎಚ್ಚರಿಸಿದರು.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

04/11/2026 03:55 pm

Cinque Terre

23.19 K

Cinque Terre

0

ಸಂಬಂಧಿತ ಸುದ್ದಿ