ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೊಸಳ್ಳಿ ಗ್ರಾಮದಲ್ಲಿ ವಿಬಿ-ಜಿ ರಾಮ್-ಜಿ ಕಾಮಗಾರಿಗೆ ಸ್ಥಳಕ್ಕೆ ಕಾರ್ಯನಿರ್ವಾಹಕ ಅಧಿಕಾರಿ ಭೇಟಿ

ಶಿರಹಟ್ಟಿ:ತಾಲೂಕಿನ ಕಡಕೋಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಳ್ಳಿ ಗ್ರಾಮದಲ್ಲಿ ವಿಬಿ-ಜಿ ರಾಮ್-ಜಿ ಯೋಜನೆಯಡಿ ಕೈಗೊಳ್ಳಲಾಗಿರುವ ಕಾಮಗಾರಿ ಸ್ಥಳಕ್ಕೆ ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿ ರಾಮಣ್ಣ ದೊಡ್ಡಮನಿ ಅವರು ಭೇಟಿ ನೀಡಿ ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿದರು.

ಈ ವೇಳೆಯಲ್ಲಿ ಮಾತನಾಡಿದ ಅವರು ಕಾಮಗಾರಿಯ ಗುಣಮಟ್ಟ, ಅನುಷ್ಠಾನದ ವಿಧಾನ ಹಾಗೂ ಯೋಜನೆಯ ನಿಯಮಾನುಸಾರ ಕಾಮಗಾರಿಯನ್ನು ಕೈಗೊಳ್ಳುತ್ತಿರುವ ಕುರಿತು ಪರಿಶೀಲನೆ ನಡೆಸಿದರು.ಕಾಮಗಾರಿಗಳನ್ನು ನಿಗದಿತ ಮಾನದಂಡಗಳಂತೆ ಗುಣಮಟ್ಟದಿಂದ ಹಾಗೂ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಕಡಕೋಳ ಗ್ರಾಮ ಪಂಚಾಯಿತಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಿವಾನಂದ ಮಾಲವಾಡ, ವಿಬಿ-ಜಿ ರಾಮ್-ಜಿ ಯೋಜನೆಯ ತಾಂತ್ರಿಕ ಸಂಯೋಜಕಿ ವಿಜಯಲಕ್ಷ್ಮಿ ಅಂಗಡಿ, ಐ.ಇ.ಸಿ. ಸಂಯೋಜಕ ವಿರೇಶ ಪಟ್ಟಣಶೆಟ್ಟಿ ಹಾಗೂ ತಾಂತ್ರಿಕ ಸಹಾಯಕ ಆಂಜನೇಯ ಬಿ. ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

04/11/2026 04:42 pm

Cinque Terre

780

Cinque Terre

0

ಸಂಬಂಧಿತ ಸುದ್ದಿ