ಚಿಕ್ಕಮಗಳೂರು : ಕಾಫಿನಾಡಿನ ಜಿಲ್ಲಾ ಕೇಂದ್ರದಿಂದ ಕೊಪ್ಪ, ಶೃಂಗೇರಿ, ಎನ್.ಆರ್.ಪುರ ಹಾಗೂ ಕಳಸ ತಾಲೂಕುಗಳನ್ನು ಸಂಪರ್ಕಿಸುವ ಪ್ರಮುಖ ರಾಜ್ಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು, ವಾಹನ ಸವಾರರು ತೀವ್ರ ತೊಂದರೆ ಅನುಭವಿಸುವಂತಾಗಿದೆ.
ರಸ್ತೆಯುದ್ದಕ್ಕೂ ಬೃಹತ್ ಗುಂಡಿಗಳು ಬಿದ್ದಿರುವುದರಿಂದ ಶೃಂಗೇರಿ, ಹೊರನಾಡು ಸೇರಿದಂತೆ ಪ್ರಸಿದ್ಧ ಪುಣ್ಯಕ್ಷೇತ್ರಗಳಿಗೆ ಆಗಮಿಸುವ ಭಕ್ತರು, ಪ್ರವಾಸಿಗರು ಹಾಗೂ ನಿತ್ಯ ಪ್ರಯಾಣಿಸುವ ಜನಸಾಮಾನ್ಯರು ಮತ್ತು ಶಾಲಾ-ಕಾಲೇಜು ವಿದ್ಯಾರ್ಥಿಗಳು ಜೀವ ಕೈಯಲ್ಲಿ ಹಿಡಿದು ಸಂಚರಿಸುವ ದುಸ್ಥಿತಿ ನಿರ್ಮಾಣವಾಗಿದೆ.
ವಾಹನಗಳು ಹಾಳಾಗುವುದರ ಜೊತೆಗೆ ಅಪಘಾತಗಳ ಸಂಖ್ಯೆಯೂ ಹೆಚ್ಚುತ್ತಿದೆ. ಆದರೂ ಜನಪ್ರತಿನಿಧಿಗಳು 'ಅನುದಾನ ಬಿಡುಗಡೆಯಾಗಿದೆ, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ' ಎಂದು ಕಳೆದ ಆರು ತಿಂಗಳಿಂದಲೂ ಭರವಸೆ ನೀಡುತ್ತಾ ಕಾಲಹರಣ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಈ ಕುರಿತು ನಮ್ಮ ಚಿಕ್ಕಮಗಳೂರು ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ ನೋಡಿ.
PublicNext
04/11/2026 04:57 pm
LOADING...