ಬಳ್ಳಾರಿ ನಗರದಲ್ಲಿ ಹಗಲು ಹೊತ್ತಿನಲ್ಲೇ ರಾಜಾರೋಷವಾಗಿ ಸಂಚರಿಸುತ್ತಿರುವ ಟಿಪ್ಪರ್ ಲಾರಿಗಳಿಂದ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದ್ದು, ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಟಿಪ್ಪರ್‌ಗಳ ಸಂಚಾರಕ್ಕೆ ಕಡಿವಾಣ ಹಾಕುವಂತೆ ಆಗ್ರಹಿಸಿ ಬಿಜೆಪಿ ನಾಯಕರು ನಗರದ ಎಪಿಎಂಸಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
ಇತ್ತೀಚೆಗೆ ಟಿಪ್ಪರ್ ಲಾರಿಗೆ ಬಲಿಯಾದ ಯುವಕ ಮಹಮ್ಮದ್ ಇಮ್ರಾನ್ ಕುಟುಂಬಕ್ಕೆ ನ್ಯಾಯ ಒದಗಿಸಬೇಕು, ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಹಾಗೂ ನಗರದಲ್ಲಿ ಟಿಪ್ಪರ್ ಸಂಚಾರಕ್ಕೆ ಕಟ್ಟುನಿಟ್ಟಿನ ನಿಯಂತ್ರಣ ಹೇರಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ನಗರದಲ್ಲಿ ಜನಸಾಮಾನ್ಯರ ಜೀವಕ್ಕೆ ಬೆಲೆಯೇ ಇಲ್ಲದಂತಾಗಿದೆಯೇ? ಅಮಾಯಕರು ಬಲಿಯಾದ ಮೇಲೆಯೇ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕೇ? ಸುರಕ್ಷಿತ ಸಂಚಾರ ವ್ಯವಸ್ಥೆ ಕಲ್ಪಿಸುವಲ್ಲಿ ಜಿಲ್ಲಾಡಳಿತ ಮತ್ತು ಸಂಬಂಧಪಟ್ಟ ಇಲಾಖೆಗಳು ಇನ್ನೆಷ್ಟು ದಿನ ನಿರ್ಲಕ್ಷ್ಯ ವಹಿಸುತ್ತವೆ ಎಂದು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಮಾಜಿ ಸಚಿವ ಬಿ. ಶ್ರೀರಾಮುಲು, ಮಾಜಿ ಶಾಸಕ ಗಾಲಿ ಸೋಮಶೇಖರ ರೆಡ್ಡಿ, ಪಾಲಿಕೆ ಪ್ರತಿಪಕ್ಷ ನಾಯಕ ಶ್ರೀನಿವಾಸ್ ಮೋತ್ಕರ್ ಸೇರಿದಂತೆ ಅಲ್ಲಾಭಕ್ಷ್, ಮೆಹಬೂಬ್, ಎಸ್. ಮಲ್ಲನಗೌಡ, ಹೇಮಣ್ಣ, ಹನುಮಂತ ಲಕ್ಷ್ಮಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವರದಿ : ಹೊನ್ನೂರಸ್ವಾಮಿ ಕೆ. ಟಿ.
ಪಬ್ಲಿಕ್ ನೆಕ್ಸ್ಟ್, ಬಳ್ಳಾರಿ.
PublicNext
04/11/2026 04:57 pm
LOADING...