ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯಮಟ್ಟದ ಫೆನ್ಸಿಂಗ್ ಕ್ರೀಡಾಕೂಟಕ್ಕೆ ಶಾಸಕರ ಎ.ಆರ್. ಕೃಷ್ಣಮೂರ್ತಿ ಚಾಲನೆ 

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿರುವ 14 ರಿಂದ 17ರ ವಯೋಮಾನದವರ ರಾಜ್ಯಮಟ್ಟದ ಎರಡು ದಿನಗಳ ಫೆನ್ಸಿಂಗ್ ಕ್ರೀಡಾಕೂಟಕ್ಕೆ ಶಾಸಕ ಎ.ಆರ್. ಕೃಷ್ಣಮೂರ್ತಿ ಚಾಲನೆ ನೀಡಿದರು.

ತಾಲೂಕಿನ ಸಂತೇಮರಹಳ್ಳಿಯ ಆರ್ಚರಿ ಮತ್ತು ಫೆನ್ಸಿಂಗ್ ವಸತಿ ಶಾಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕ್ರೀಡಾಕೂಟವನ್ನು ಶಾಸಕ ಎ.ಆರ್. ಕೃಷ್ಣಮೂರ್ತಿ ಅವರು ಉದ್ಘಾಟಿಸಿದರು.

ಇದೇ ವೇಳೆ ಮಾತನಾಡಿದ ಶಾಸಕ ಎ.ಆರ್. ಕೃಷ್ಣಮೂರ್ತಿ, ತಾವು ಈ ಹಿಂದೆ ಶಾಸಕರಾಗಿದ್ದ ಅವಧಿಯಲ್ಲಿ ಈ ಕ್ರೀಡಾಂಗಣಕ್ಕಾಗಿ 5 ಎಕರೆ ಭೂಮಿ ಮಂಜೂರಾಗಿತ್ತು. ಇಂದು ಇದೇ ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ಮೊದಲ ಫೆನ್ಸಿಂಗ್ ಕ್ರೀಡಾಕೂಟ ಆಯೋಜನೆಯಾಗಿರುವುದಕ್ಕೆ ಸಂತಸವಾಗಿದೆ. ಇದರಿಂದ ಕ್ರೀಡಾಂಗಣದ ಸಾರ್ಥಕತೆಯಾದಂತಾಗಿದೆ ಎಂದರು.

ಇಂದು ನಡೆಯುತ್ತಿರುವ ರಾಜ್ಯಮಟ್ಟದ ಫೆನ್ಸಿಂಗ್ ಕ್ರೀಡಾಕೂಟದಲ್ಲಿ ನಾನಾ ಭಾಗಗಳಿಂದ 170 ಕ್ರೀಡಾಪಟುಗಳು ಭಾಗವಹಿಸಿದ್ದಾರೆ. ಕ್ರೀಡಾಪಟುಗಳು ಕ್ರೀಡಾ ಮನೋಭಾವನೆಯಿಂದ ಸ್ಪರ್ಧೆಯಲ್ಲಿ ಪಾಲ್ಗೊಂಡು ಕೀರ್ತಿ ತರುವಂತಾಗಲಿ. ಎರಡು ದಿನಗಳ ಕಾಲ ನಡೆಯಲಿರುವ ಕ್ರೀಡಾಕೂಟ ಯಶಸ್ವಿಯಾಗಿ ಪೂರ್ಣಗೊಳ್ಳಲಿ ಎಂದು ಶಾಸಕರು ಹಾರೈಸಿದರು.

3.13 ಕೋಟಿ ರೂ. ವೆಚ್ಚದಲ್ಲಿ ಫೆನ್ಸಿಂಗ್ ಒಳಾಂಗಣ ಕ್ರೀಡಾಂಗಣ ನಿರ್ಮಾಣವಾಗಿದೆ. ಶಾಲೆಯಲ್ಲಿ ಈಗಾಗಲೇ ಬಾಲಕರ ವಿದ್ಯಾರ್ಥಿನಿಲಯವಿದೆ. ಬಾಲಕಿಯರ ವಿದ್ಯಾರ್ಥಿನಿಲಯ ಕಟ್ಟಡವನ್ನು 2.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಇದರಿಂದ ಎಲ್ಲರಿಗೂ ವಸತಿ ಸೌಲಭ್ಯ ಲಭ್ಯವಾಗಲಿದೆ ಎಂದು ಶಾಸಕರು ತಿಳಿಸಿದರು.

Edited By : PublicNext Desk
Kshetra Samachara

Kshetra Samachara

04/11/2026 05:02 pm

Cinque Terre

540

Cinque Terre

0

ಸಂಬಂಧಿತ ಸುದ್ದಿ