ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಪುವಿನ ಅಮ್ಮನಿಗೆ ಅಕ್ಷರ ನಮನ ಸಲ್ಲಿಸಿದ ಪಬ್ಲಿಕ್ ಟಿವಿ ಮುಖ್ಯಸ್ಥ ಎಚ್.ಆರ್. ರಂಗನಾಥ್

ಕಾಪು: ಪಬ್ಲಿಕ್ ಟಿವಿ ಸಂಸ್ಥಾಪಕ ಹಾಗೂ ಆಡಳಿತ ನಿರ್ದೇಶಕ ಎಚ್.ಆರ್. ರಂಗನಾಥ್ ಅವರು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ, ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಹಾಗೂ ಅಭಿವೃದ್ಧಿ ಸಮಿತಿ ವತಿಯಿಂದ ಅಮ್ಮನ ಅನುಗ್ರಹ ಪ್ರಸಾದ ನೀಡಿ ಗೌರವಿಸಲಾಯಿತು.

ದೇವಳದ ನವನಿರ್ಮಾಣ ಕಾರ್ಯಗಳು ಹಾಗೂ ಭಕ್ತರ ಸಹಭಾಗಿತ್ವದಲ್ಲಿ ನಡೆಯುತ್ತಿರುವ ನವದುರ್ಗಾ ಲೇಖನ ಯಜ್ಞದ ಕುರಿತು ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಜರ್ಷಿ ಕೆ. ವಾಸುದೇವ ಶೆಟ್ಟಿ ಅವರು ರಂಗನಾಥ್ ಅವರಿಗೆ ಸವಿವರ ಮಾಹಿತಿ ನೀಡಿದರು.

ಬಳಿಕ ಎಚ್.ಆರ್. ರಂಗನಾಥ್ ಅವರು ನವದುರ್ಗಾ ಲೇಖನ ಯಜ್ಞದಲ್ಲಿ ಲೇಖನ ಬರೆಯುವ ಮೂಲಕ ಕಾಪುವಿನ ಅಮ್ಮನಿಗೆ ಅಕ್ಷರ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ದೇವಳದ ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ ಹಾಗೂ ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಮತ್ತು ನವದುರ್ಗಾ ಲೇಖನ ಯಜ್ಞ ಸಮಿತಿ ಕಾರ್ಯಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಬಾಲಾಜಿ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

04/11/2026 05:05 pm

Cinque Terre

542

Cinque Terre

0

ಸಂಬಂಧಿತ ಸುದ್ದಿ