ಚಾಮರಾಜನಗರ : ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ಕುರಿತು ಸರ್ವೋಚ್ಚ ನ್ಯಾಯಾಲಯವು ಪಟಾಕಿ ಬಳಕೆ ಕುರಿತಂತೆ ಸ್ಪಷ್ಟ ನಿರ್ದೇಶನಗಳನ್ನು ನೀಡಿದ್ದು, ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಸ್ಪೋಟಿಸಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಶ್ರೀರೂಪ ತಿಳಿಸಿದ್ದಾರೆ.
ಪಟಾಕಿಗಳನ್ನು ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಸ್ಪೋಟಿಸಬೇಕು. ಉಳಿದ ಸಮಯದಲ್ಲಿ ಪಟಾಕಿಗಳ ಸ್ಪೋಟವನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಲ್ಲಿ ಅನುಮತಿಸಿರುವ ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಇತರ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ಸಹ ನಿಷೇಧಿಸಿದೆ. ಪಟಾಕಿ ಮಾರಾಟ ಮಾಡುವವರು ಹಾಗೂ ಪಟಾಕಿ ಸಂಗ್ರಹಿಸುವ ಗೋದಾಮುಗಳ ಮಾಲೀಕರು ಸಂಬಂಧ ಪಟ್ಟ ಎಲ್ಲಾ ಇಲಾಖೆಗಳ ಅನುಮತಿ ಪಡೆಯಬೇಕು.
ನವದೆಹಲಿಯ ಹಸಿರು ನ್ಯಾಯ ಪೀಠದ ಆದೇಶದಂತೆ ಎಲ್ಲ ಹಸಿರು ಪಟಾಕಿಗಳ ಮೇಲೆ ಹಾಗೂ ಅವುಗಳ ಪ್ಯಾಕೇಟ್ ಮೇಲೆ ಹಸಿರು ಪಟಾಕಿಯ ಚಿಹ್ನೆ ಹಾಗೂ ಕ್ಯೂಆರ್ ಕೋಡ್ ಸಹ ಇರುತ್ತದೆ. ಹಸಿರು ಪಟಾಕಿ (ಕಡಿಮೆ ಮಾಲಿನ್ಯ ಉಂಟುಮಾಡುವ) ಗಳನ್ನು ಮಾತ್ರ ಮಾರಾಟ ಮಾಡಬೇಕು ಎಂದು ತಿಳಿಸಿದ್ದಾರೆ.
Kshetra Samachara
04/11/2026 06:39 pm
LOADING...