ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಳೆಯಂಗಡಿ: ರಾಷ್ಟ್ರೀಯ ಹೆದ್ದಾರಿ ಬದಿ ಕಾಮಗಾರಿ ಗೆಂದು ಹೊಂಡ ತೋಡಿ ಕಣ್ಮರೆಯಾದ ಸಿಬ್ಬಂದಿ

ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಜಂಕ್ಷನ್ ಅವ್ಯವಸ್ಥೆಗಳ ಆಗರವಾಗಿದ್ದು ಹೆದ್ದಾರಿ ಸರ್ವೀಸ್ ರಸ್ತೆ ಕಾಮಗಾರಿ ಇನ್ನು ಆರಂಭವಾಗದೆ ಹೆದ್ದಾರಿ ಸಂಚಾರ ಅಪಾಯಕಾರಿಯಾಗಿ ಪರಿಣಮಿಸಿದೆ. ಹೆದ್ದಾರಿ ಸರ್ವಿಸ್ ರಸ್ತೆಯಲ್ಲಿ ಉದ್ದಕ್ಕೆ ಚರಂಡಿ ರೀತಿಯಲ್ಲಿ ಭಾರೀ ಗಾತ್ರದ ಹೊಂಡ ಅಗೆದಿದ್ದು ರಾತ್ರಿ ಹೊತ್ತು ಅನೇಕರು ಹೊಂಡಕ್ಕೆ ಜಾರಿ ಬಿದ್ದು ಗಾಯಗೊಂಡಿದ್ದಾರೆ ಎಂದು ಸ್ಥಳೀಯರು ಹೆದ್ದಾರಿ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೆದ್ದಾರಿ ಬದಿ ತೆಗೆದಿರುವ ಹೊಂಡದಿಂದ ವಾಹನ ಸಂಚಾರಕ್ಕೆ ಕೂಡ ತೊಂದರೆಯಾಗಿದ್ದು ಹಳೆಯಂಗಡಿಯಿಂದ ಕಿನ್ನಿಗೋಳಿ ಕಟೀಲು ಮೂಡಬಿದ್ರೆಗೆ ಹಾಗೆಯೇ ಕಟೀಲು,ಕಿನ್ನಿಗೋಳಿ,ಪಕ್ಷಿಕೆರೆ ಕಡೆಯಿಂದ ಮಂಗಳೂರು ಕಡೆಗೆ ಇಕ್ಕಟ್ಟಾದ ರಸ್ತೆಯಲ್ಲಿ ವಾಹನಗಳು ಸಂಚರಿಸಬೇಕಾದ ಪರಿಸ್ಥಿತಿ ಉಂಟಾಗಿದೆ.

ಮಂಗಳೂರು ಉಡುಪಿ ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಜಂಕ್ಷನ್ ಸದಾ ಜನನಿಬಿಡ ಪ್ರದೇಶವಾಗಿದ್ದು ಎರ್ರಾಬಿರ್ರಿ ವಾಹನಗಳು ಸಂಚರಿಸುವುದರಿಂದ ಅಪಘಾತದ ಭೀತಿ ಎದುರಾಗಿದೆ.

ಫ್ಲೈ ಓವರ್ ನಿರ್ಮಿಸಿ

ಸದಾ ಅಪಘಾತಗಳ ತಾಣವಾಗಿರುವ ಹಳೆಯಂಗಡಿ ಜಂಕ್ಷನ್ ಗೆ ಫ್ಲೈ ಓವರ್ ಅವಶ್ಯಕತೆ ಇದೆ ಎಂದು ಸಾಮಾಜಿಕ ಕಾರ್ಯಕರ್ತ ಧರ್ಮಾನಂದ ಶೆಟ್ಟಿಗಾರ್ ಪ್ರತಿಪಾದಿಸಿದ್ದಾರೆ.

ಅವರು ಮಾಧ್ಯಮದೊಂದಿಗೆ ಮಾತನಾಡಿ ರಾಷ್ಟ್ರೀಯ ಹೆದ್ದಾರಿ ಚತುಷ್ಪಥಗೊಂಡ ಬಳಿಕ ಹಳೆಯಂಗಡಿ ಜಂಕ್ಷನ್,ಪಾವಂಜೆ ಜಂಕ್ಷನ್ ಹಾಗೂ ಪಡುಪಣಂಬೂರು ಜಂಕ್ಷನ್ ಗಳು ಅಪಾಯಕಾರಿಯಾಗಿ ಪರಿಣಮಿಸಿದ್ದು ಸೂಕ್ತ ಸರ್ವಿಸ್ ರಸ್ತೆ ಇಲ್ಲದೆ ಅಪಘಾತಗಳು ನಡೆದು ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ ಹಾಗೂ ಹಲವಾರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಭಾಗದಲ್ಲಿ ಹೆದ್ದಾರಿ ಸಂಚಾರ ಅಪಾಯಕಾರಿಯಾಗಿದೆ. ಕೂಡಲೇ ಹೆದ್ದಾರಿ ಇಲಾಖೆ ಎಚ್ಚೆತ್ತು ಹಳೆಯಂಗಡಿ ಜಂಕ್ಷನ್ ಬಳಿ ನಡೆಸಿರುವ ಅರ್ಧಂಬರ್ಧ ಕಾಮಗಾರಿಗಳನ್ನು ಪೂರ್ತಿಗೊಳಿಸಬೇಕು ಎಂದು ಅವರು ಹೆದ್ದಾರಿ ಇಲಾಖೆಯನ್ನು ಒತ್ತಾಯಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

04/11/2026 07:00 pm

Cinque Terre

644

Cinque Terre

0

ಸಂಬಂಧಿತ ಸುದ್ದಿ