ಸುರತ್ಕಲ್: ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಎನ್‌ಐಟಿಕೆ ಮುಖ್ಯ ದ್ವಾರದ ಎದುರಲ್ಲೇ ಅತ್ಯಂತ ಕೊಳಕಿನಿಂದ ಕೂಡಿದ್ದ ಬಸ್ ನಿಲ್ದಾಣವನ್ನು ‘ಮೀಡಿಯಾ ಮನಸುಗಳು’ ತಂಡದ ಸದಸ್ಯರು ಸ್ವಚ್ಛಗೊಳಿಸುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದರು.
ಬಸ್ ನಿಲ್ದಾಣ ಸಂಪೂರ್ಣ ತ್ಯಾಜ್ಯಮಯವಾಗಿದ್ದು ವಿದ್ಯಾರ್ಥಿಗಳು ಕುಳಿತುಕೊಳ್ಳಲೂ ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿತ್ತು.
ಸಾರ್ವಜನಿಕರ ಸಂಕಷ್ಟಕ್ಕೆ ಸ್ಪಂದಿಸಿದ ತಂಡದ ಸದಸ್ಯರು ತಮ್ಮ 13ನೇ ಸೇವಾ ಚಟುವಟಿಕೆಯ ಅಂಗವಾಗಿ ಬಸ್ ನಿಲ್ದಾಣವನ್ನು ಸ್ವಚ್ಛಗೊಳಿಸಿದರು.
ಸ್ವಚ್ಛತಾ ಅಭಿಯಾನಕ್ಕೆ ನಿಕಟಪೂರ್ವ ಪಾಲಿಕೆ ಸದಸ್ಯರಾದ ಶ್ವೇತಾ ಪೂಜಾರಿ ಸಹಕರಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು ಹಾಗೂ ‘ಮೀಡಿಯಾ ಮನಸುಗಳು’ ತಂಡದ ಪ್ರಮುಖರಾದ ಶಶಿ ಬೆಳ್ಳಾಯರು, ಗಿರೀಶ್ ಮಣೇಲ್, ಶಿವು ಕುಲಾಲ್, ರಜನ್ ಕುಮಾರ್ ಕಾವೂರು, ರಾಕೇಶ್ ಎಕ್ಕಾರ್ ಹಾಗೂ ಗಣೇಶ್ ದೇವಾಡಿಗ ಪಂಜ ಪಾಲ್ಗೊಂಡು ಕಾರ್ಯನಿರ್ವಹಿಸಿದರು.
ಸಾಮಾನ್ಯವಾಗಿ ಬಸ್ ನಿಲ್ದಾಣಗಳ ನಿರ್ಮಾಣ ಮತ್ತು ನಿರ್ವಹಣೆಗಾಗಿ ಖಾಸಗಿ ಸಂಸ್ಥೆಗಳ ಪ್ರಾಯೋಜಕತ್ವ ಪಡೆಯಲಾಗುತ್ತದೆ. ಪ್ರತಿಯಾಗಿ ಆ ಸಂಸ್ಥೆಗಳಿಗೆ ಜಾಹೀರಾತು ಪ್ರದರ್ಶಿಸಲು ಅವಕಾಶ ಕಲ್ಪಿಸಲಾಗುತ್ತದೆ. ಬಸ್ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವ ವ್ಯವಸ್ಥೆಗಿಂತಲೂ ಪ್ರಾಯೋಜಕ ಸಂಸ್ಥೆಯ ಜಾಹೀರಾತು ಫಲಕವೇ ದೊಡ್ಡದಾಗಿ ಕಾಣಿಸುತ್ತದೆ. ಆದರೆ ಇಂತಹ ಬಸ್ ನಿಲ್ದಾಣಗಳ ನಿರ್ವಹಣೆಯ ಹೊಣೆ ಯಾರದ್ದು ಎಂಬುದು ಗಂಭೀರ ಪ್ರಶ್ನೆಯಾಗಿದೆ.
Kshetra Samachara
04/11/2026 07:18 pm
LOADING...