ಬೆಳಗಾವಿ: ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಆಸಿಫ್ (ರಾಜು) ಸೇಠ್ ಅವರು ಸರ್ದಾರ್ ಪ್ರೌಢಶಾಲೆಗೆ ಭೇಟಿ ನೀಡಿ, ನೂತನವಾಗಿ ನಿರ್ಮಿಸಲಾದ ಸಭಾಂಗಣವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು, ಶಿಕ್ಷಣದ ಮಹತ್ವವನ್ನು ತಿಳಿಸಿ, ಆತ್ಮವಿಶ್ವಾಸ ಮತ್ತು ದೃಢಸಂಕಲ್ಪದೊಂದಿಗೆ ವಿದ್ಯಾಭ್ಯಾಸ ಮುಂದುವರಿಸಿ ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವಂತೆ ಪ್ರೋತ್ಸಾಹಿಸಿದರು.
ಬಳಿಕ ಶಾಲಾ ಆವರಣದಲ್ಲಿ ನಿರ್ಮಾಣ ಹಂತದಲ್ಲಿರುವ ನೂತನ ಕಟ್ಟಡದ ಕಾಮಗಾರಿಯನ್ನು ಪರಿಶೀಲಿಸಿದರು. ಒಟ್ಟು 16 ತರಗತಿ ಕೊಠಡಿಗಳನ್ನು ಒಳಗೊಂಡ ಈ ಕಟ್ಟಡ ಪೂರ್ಣಗೊಂಡ ಬಳಿಕ ವಿದ್ಯಾರ್ಥಿಗಳಿಗೆ ಹೆಚ್ಚಿನ ಶೈಕ್ಷಣಿಕ ಸೌಲಭ್ಯಗಳು ಲಭ್ಯವಾಗಲಿದ್ದು, ಉತ್ತಮ ಕಲಿಕಾ ವಾತಾವರಣ ನಿರ್ಮಾಣವಾಗಲಿದೆ.
ಸರ್ಕಾರಿ ಶಾಲೆಗಳು ಹಾಗೂ ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡುತ್ತಿರುವ ಶಾಸಕ ಆಸಿಫ್ ಸೇಠ್, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಮತ್ತು ಅಗತ್ಯ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ನಿರಂತರ ಪ್ರಯತ್ನ ನಡೆಸುತ್ತಿದ್ದಾರೆ.
ಈ ಸಂದರ್ಭದಲ್ಲಿ ಯುವ ನಾಯಕ ಅಮಾನ್ ಸೇಠ್, ಬಿಆರ್‌ಸಿ ಈರಯ್ಯ ಹಿರೇಮಠ, ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಶಾಲೆಯ ಸಿಬ್ಬಂದಿ ಉಪಸ್ಥಿತರಿದ್ದರು.
Kshetra Samachara
04/11/2026 07:54 pm
LOADING...