ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿಎಂ ಡಿಕೆಶಿಗೆ ಕರುಣಾಕರ ರೆಡ್ಡಿ ಮನವಿ

ಹರಪನಹಳ್ಳಿ: ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನಲ್ಲಿ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಅಗ್ನಿ ಅವಘಡಗಳ ಸಮಸ್ಯೆ ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಿ ಮಾಜಿ ಶಾಸಕ ಜಿ. ಕರುಣಾಕರ ರೆಡ್ಡಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಕಡತಿ ಕ್ಯಾಂಪ್ ಹಾಗೂ ವಟ್ಲಹಳ್ಳಿ ಗ್ರಾಮಗಳಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಸುಮಾರು 10 ಎಕರೆ ಜಮೀನಿನ ಕಬ್ಬು ಸುಟ್ಟು ಭಸ್ಮವಾಗಿದ್ದು, ರೈತರಿಗೆ ₹26 ಲಕ್ಷಕ್ಕೂ ಹೆಚ್ಚು ಹಾನಿಯಾಗಿದೆ. ಕಡತಿ ಶಂಕ್ರಪ್ಪ, ಕಡತಿ ರತ್ನಮ್ಮ, ಸಂಗಜ್ಜಿ ಹನುಮವ್ವ ಹಾಗೂ ನಾಗಪ್ಪ ಸೇರಿದಂತೆ ಸಂಕಷ್ಟಕ್ಕೊಳಗಾದ ರೈತರಿಗೆ ಸರ್ಕಾರದಿಂದ ಸೂಕ್ತ ಪರಿಹಾರ ವಿತರಿಸಲು ಮನವಿ ಸಲ್ಲಿಸಿದರು.

ದುಗ್ಗಾವತಿಯಲ್ಲಿ ಶಾಮನೂರು ಶಿವಶಂಕರಪ್ಪ ಸಕ್ಕರೆ ಕಾರ್ಖಾನೆ ವ್ಯಾಪ್ತಿಯಲ್ಲಿ ಅಪಾರ ಪ್ರಮಾಣದಲ್ಲಿ ಕಬ್ಬು ಬೆಳೆಯಲಾಗುತ್ತದೆ. ಆದ್ರೆ ಆಗಾಗ ಅಗ್ನಿ ಅವಘಡಗಳು ಸಂಭವಿಸುತ್ತಿವೆ. ತುರ್ತು ಸಂದರ್ಭಗಳಲ್ಲಿ ಬೆಂಕಿ ನಂದಿಸಲು ಕಾರ್ಖಾನೆಯ ಬಳಿ ಸ್ವಂತ ಅಗ್ನಿಶಾಮಕ ವಾಹನಗಳಿಲ್ಲದಿರುವುದರಿಂದ ರೈತರು ಅಪಾರ ನಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ ಕಾರ್ಖಾನೆ ಆವರಣದಲ್ಲಿ ತುರ್ತಾಗಿ ಎರಡು ಅಗ್ನಿಶಾಮಕ ವಾಹನಗಳ ವ್ಯವಸ್ಥೆ ಮಾಡುವಂತೆ ಆಡಳಿತ ಮಂಡಳಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಕರುಣಾಕರ ರೆಡ್ಡಿ ಮನವಿ ಮಾಡಿದ್ರು.

Edited By : Nirmala Aralikatti
Kshetra Samachara

Kshetra Samachara

04/11/2026 07:56 pm

Cinque Terre

100

Cinque Terre

0

ಸಂಬಂಧಿತ ಸುದ್ದಿ